ನಾಗಮಂಗಲ: ‘ನಮ್ಮ ಪೂರ್ವಿಕರು ನಡೆಸುತ್ತಿದ್ದ ಧಾರ್ಮಿಕ ಪರಂಪರೆಗಳು ಇಂದಿಗೂ ಉಳಿದಿರುವುದು ಹಳ್ಳಿಗಳಲ್ಲಿ ಮಾತ್ರ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ತುಪ್ಪದಮಡು ಗ್ರಾಮದ ಪ್ರವೇಶದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾದ್ವಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಹಳ್ಳಿಗಳಲ್ಲಿ ನಿರ್ಮಿಸುವ ಮಹಾದ್ವಾರಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿರುತ್ತವೆ ಎಂದರು. ‘ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಹಳ್ಳಿಗಳೂ ಸಹ ಸರ್ವತೋಮುಖ ಅಭಿವೃದ್ಧಿಯಾಗಬೇಕೆಂಬ ಉದ್ದೇಶ ನನ್ನದಾಗಿದೆ. ಕಳೆದ ಮೂರು ವರ್ಷದಿಂದ ಜನರ ನಿರೀಕ್ಷೆಗೂ ಮೀರಿ ತಾಲ್ಲೂಕಿನಲ್ಲಿ ಇಷ್ಟೊಂದು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದೇನೆ’ ಎಂದರು.

ಗ್ರಾಮಕ್ಕೆ ಭೇಟಿ ಕೊಟ್ಟ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಊರಿನ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ತಂಬಿಟ್ಟು ಹಾಗೂ ಬೆಲ್ಲದಾರತಿಯೊಂದಿಗೆ ಅದ್ದೂರಿ ಸ್ವಾಗತ ಕೋರಿದರು.

ತಾಲ್ಲೂಕಿನ ಪಡುವಲಪಟ್ಟಣ ಗ್ರಾಮದಿಂದ ಕಾನನಬ್ರಹ್ಮದೇವರ ದೇವಸ್ಥಾನದವರೆಗೆ ₹3ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವರು, ಹೊಸೂರುಕೊಪ್ಪಲು, ಗಂಗನಹಳ್ಳಿ, ಉಯ್ಯನಹಳ್ಳಿ, ಮುದ್ದನಹಳ್ಳಿ, ವಡ್ಡರಹಟ್ಟಿ, ಅಣೆಚನ್ನಾಪುರ ಹಾಗೂ ವರಹಾಸಂದ್ರ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ತಹಶೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಕೆಆರ್ಐಡಿಎಲ್ ಎಇಇ ಚೈತ್ರ, ಜೆಇ ಶರತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಪ್ರಸನ್ನ, ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ರಾಘವೇಂದ್ರ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಧನರಾಜ್, ಮಾಜಿ ಅಧ್ಯಕ್ಷೆ ಚಿಕ್ಕಮ್ಮ, ಮುಖಂಡರಾದ ಸುನಿಲ್ಲಕ್ಷ್ಮೀಕಾಂತ್, ಪಿ.ಜೆ.ಜಯರಾಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-40-1337918252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.