ನಾಗಮಂಗಲ: ‘ತಾಲ್ಲೂಕಿನಲ್ಲಿ ಪ್ರಗತಿಯಲ್ಲಿರುವ ಯಾವುದೇ ಯೋಜನೆಯ ಕಾಮಗಾರಿಗಳು ಆ ವರ್ಷವೇ ಪೂರ್ಣಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಈಗಾಗಲೇ ಟೆಂಡರ್ ಆಗಿ ಪ್ರಗತಿಯಲ್ಲಿರುವ ಕಾಮಗಾರಿಗಳು ನಿಗದಿತ ಅವಧಿಯೊಳಗೆ ಪೂರ್ಣಗೊಂಡು ಹಣ ಖರ್ಚಾದರೆ ಮುಂದಿನ ವರ್ಷದ ಅನುದಾನ ತರಲು ಸಾಧ್ಯ. ಕಳೆದ ವರ್ಷದ ಹಲವು ಕಾಮಗಾರಿಗಳೂ ಪೂರ್ಣಗೊಂಡಿವೆ. ಪ್ರಗತಿಯಲಿರುವ ಇನ್ನಷ್ಟು ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.

ಸರ್ಕಾರದ ಐದು ಗ್ಯಾರಂಟಿಗಳಿಂದ ಯಾರೂ ವಂಚಿತರಾಗಬಾರದು. ಯೋಜನೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಗ್ಯಾರಂಟಿಗಳು ಪ್ರತಿಯೊಬ್ಬರಿಗೂ ತಲುಪುತ್ತಿರುವ ಬಗ್ಗೆ ಪರಿಶೀಲಿಸಬೇಕು. ಯಾರಿಗಾದರೂ ಯೋಜನೆಯ ಲಾಭ ದೊರಕದಿದ್ದರೆ ಸೂಕ್ತ ಕ್ರಮ ಕೈಗೊಂಡು ಯೋಜನೆಯ ಲಾಭ ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ರೈತರಿಗೆ ಸಂಬಂಧಪಟ್ಟ ಇಲಾಖೆಗಳು ರೈತಪರ ಕೆಲಸಗಳನ್ನು ಮಾಡಬೇಕು. ಈ ವರ್ಷ ಹೆಚ್ಚು ಮಳೆಯಾಗುವುದಿಲ್ಲ ಎಂಬ ವರದಿಯಿದೆ. ಮಳೆಯಿಂದಾಗಲಿ ಅಥವಾ ಮಳೆ ಇಲ್ಲದೇ ಯಾವುದೇ ರೀತಿಯ ಹಾನಿ ಯಾದರೂ ಸಕಾಲಕ್ಕೆ ರೈತರಿಗೆ ಪರಿಹಾರ ನೀಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಮುಂಗಾರು ಹಂಗಾಮನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ಮತ್ತು ಬೀಜವನ್ನು ಸಕಾಲಕ್ಕೆ ರೈತರಿಗೆ ತಲುಪಿಸಲಾಗುವುದು’ ಎಂದರು.

‘ಯಾವುದೇ ರೀತಿಯ ಗೊಬ್ಬರ ಸರಬರಾಜು, ಉತ್ಪಾದನೆ ಮತ್ತು ದರ ನಿಗದಿ ಎಲ್ಲವೂ ಕೇಂದ್ರ ಸರ್ಕಾರದ ಹಿಡಿತದಲ್ಲಿದ್ದು, ನಿರ್ವಹಣೆ ಮಾಡುವುದಷ್ಟೇ ರಾಜ್ಯ ಸರ್ಕಾರದ ಕೆಲಸ. ರಾಜ್ಯಕ್ಕೆ ಅಗತ್ಯವಿರುವ ಗೊಬ್ಬರವನ್ನು ಸಕಾಲಕ್ಕೆ ಸರಬರಾಜು ಮಾಡಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಗೊಬ್ಬರ ಮಾರಾಟಗಾರರು ಸರ್ಕಾರದ ಮಾರ್ಗಸೂಚಿಗಳನ್ನು ಧಿಕ್ಕರಿಸಿ ತಪ್ಪು ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿ ಅಶೋಕ, ತಾಲ್ಲೂಕು ಪಂಚಾಯತಿ ಇಒ ಸತೀಶ್, ಡಿವೈಎಸ್ಪಿ ಬಿ.ಚಲುವರಾಜು, ಸಿಪಿಐ ಹೇಮಂತ್ ಕುಮಾರ್, ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್,ಬಿಇಒ ಲೋಕೇಶ್, ಸೆಸ್ಕ್ ಇಇ ಮಂಜುನಾಥ್, ಸಿಡಿಪಿಒ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮುಖಂಡರಾದ ಎಸ್.ಬಿ.ರಮೇಶ್, ವರದರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-40-844611245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.