ನಾಗಮಂಗಲ: ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಭಾರತೀಯರಲ್ಲಿ ವಿಶ್ವ ಭ್ರಾತೃತ್ವ ಭಾವನೆಯ ಜೊತೆಗೆ ವಿಶ್ವಶಾಂತಿಯನ್ನು ಬಯಸುವ ಸದ್ಭಾವವೂ ಪ್ರೇರಣೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್ ಮಂಜುನಾಥ ಹೇಳಿದರು.

ತಾಲ್ಲೂಕಿನ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕವು ವಿವಿಧ ಇಲಾಖೆಗಳ ಸಹಯೋಗದಲ್ಲಿ ಏಳು ದಿನಗಳ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಭಾಗವಾಗಿ ಶುಕ್ರವಾರ ಪಟ್ಟಣದ ಸೌಮ್ಯಕೇಶವಸ್ವಾಮಿ ದೇವಸ್ಥಾನದಿಂದ ಟಿ ಬಿ ಬಡಾವಣೆಯವರೆಗೂ ವಿಶ್ವಶಾಂತಿಗಾಗಿ ನಡೆಸಿದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಪ್ರೊ. ಎ.ಟಿ. ಶಿವರಾಮ್ ಮಾರ್ಗದರ್ಶನದಂತೆ ನಡೆದ ಜಾಥಾದಲ್ಲಿ ಕರ್ನಾಟಕ, ಪಂಜಾಬ್, ಹರಿಯಾಣ, ತಮಿಳುನಾಡು, ಆಂಧ್ರಪ್ರದೇಶದ 150 ಸ್ವಯಂಸೇವಕರು ಬಿಜಿಎಸ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ವಿಶ್ವಶಾಂತಿಗಾಗಿ ಘೋಷಣೆ ಕೂಗಿದರು. ಸಾರ್ವಜನಿಕರು ಭಾಗಿಯಾದರು.

ಕಾರ್ಯಕ್ರಮ ಅಧಿಕಾರಿಗಳಾದ ಸಿ.ಎಲ್. ಶಿವಣ್ಣ, ಪ್ರೊ.ಎಸ್.ಆರ್ ಶಂಕರ್, ಎಸ್. ಕಾಂತರಾಜು, ಪಟ್ಟಣ ಪೊಲೀಸ್ ಗುಪ್ತಚರ ವಿಭಾಗದ ಕೆ.ಎಸ್.ಶಂಕರಯ್ಯ, ಒಕ್ಕಲಿಗರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜಿ.ಸಿ.ಕುಮಾರ್, ಜಿ. ಹಂಪೇಶ್ ಉಪನ್ಯಾಸಕ ಎ.ಜೆ.ಶರತ್ ಬಾಬು, ಕಸಾಪ ತಾಲ್ಲೂಕು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಕೊಣನೂರು ಧನಂಜಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-40-614088872

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.