ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ನಾಗತಿಹಳ್ಳಿಯಲ್ಲಿ ಮಾರ್ಚ್ 18 ಮತ್ತು 19ರಂದು ‘ನಾಗತಿಹಳ್ಳಿ ಸಂಸ್ಕೃತಿ ಹಬ್ಬ - 2026’ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೊದಲ ದಿನ ಬೆಳಿಗ್ಗೆ 10ರಿಂದ ಉಚಿತ ವೈದ್ಯಕೀಯ ಶಿಬಿರಗಳು ಹಾಗೂ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸುಗಮ ಸಂಗೀತ ಪರಿಷತ್ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ಅಧ್ಯಕ್ಷತೆಯಲ್ಲಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ತಂಡದಿಂದ ಕನ್ನಡ ಗೀತ ಗಾಯನ ನಡೆಯಲಿದೆ. ರಾತ್ರಿ 8ರಿಂದ ವಿದ್ಯಾರ್ಥಿಗಳಿಂದ ನೃತ್ಯ ಮತ್ತು ನಾಟಕ ಪ್ರದರ್ಶನ ಇರಲಿದೆ.

19ರಂದು ಸಂಜೆ 4ರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಜನಪದ ನೃತ್ಯ ಪ್ರದರ್ಶನ ನಡೆಯಲಿದೆ. ಸಂಜೆ 6ಕ್ಕೆ ಶಿವಕುಮಾರ್ ಕಾರೇಪುರ ಸಂಪಾದಕತ್ವದ ರೈತರೇ ಬರೆದ ಸಮೂಹ ಪ್ರವಾಸ ಕಥನ ‘ಉತ್ತರ ಪ್ರದೇಶದಲ್ಲಿ ನಾವು’ ಕೃತಿ ಬಿಡುಗಡೆ ಸಮಾರಂಭ ನಡೆಯಲಿದೆ. ಚಲನಚಿತ್ರ ನಟ ಮಂಡ್ಯ ರಮೇಶ್ ಉಪಸ್ಥಿತರಿರಲಿದ್ದಾರೆ.

ಪದ್ಮಶ್ರೀ ಪುರಸ್ಕೃತ ‘ಪುಸ್ತಕ ಮನೆ’ಯ ಅಂಕೇಗೌಡ ಅವರನ್ನು ಸನ್ಮಾನಿಸಲಾಗುವುದು. ಅಂಕಣಕಾರ ಪ್ರೊ.ಎಂ. ಕೃಷ್ಣೇಗೌಡ ‘ಕಿರಿಯರಿಗಾಗಿ ನಾಳೆಗಳನ್ನು ಕಟ್ಟೋಣ’ ಕುರಿತು ಮಾತನಾಡಲಿದ್ದಾರೆ.

‘ರಾತ್ರಿ 8ರಿಂದ ಮಂಡ್ಯ ರಮೇಶ್ ಸಾರಥ್ಯದ ನಟನ ತಂಡದಿಂದ ‘ಸಂಸಾರದಲ್ಲಿ ಸನಿದಪ’ ನಾಟಕ ಪ್ರದರ್ಶನಗೊಳ್ಳಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸಿ’ ಎಂದು ಹಬ್ಬದ ರೂವಾರಿ ನಾಗತಿಹಳ್ಳಿ ಚಂದ್ರಶೇಖರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.