ಮಂಡ್ಯ: ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡರ ಕೊಡುಗೆ ಸಮಾಜಕ್ಕೆ ಅಪಾರ. ಇಬ್ಬರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶನಿವಾರ ನಡೆದ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜೂನ್ 4ರಂದು ಬೆಳಿಗ್ಗೆ 11ಕ್ಕೆ ಕಲಾಮಂದಿರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜೂನ್ 27ರಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಬೆಳಿಗ್ಗೆ 11.30ಕ್ಕೆ ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು ಎಂದರು.

ಮೆರವಣಿಗೆ: ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡ ಮಹನೀಯರ ಜಯಂತಿಯ ಪ್ರಯುಕ್ತ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳ್ಳಿಗೆ 9.30ಕ್ಕೆ ವರ್ಣರಂಜಿತ ರಥದಲ್ಲಿ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸುವ ವ್ಯವಸ್ಥೆ ಮಾಡಿ. ಇದರೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.

ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಸಂಜಯ ವೃತ್ತದಲ್ಲಿ ಮಹನೀಯರ ಭಾವಚಿತ್ರವನ್ನು ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮೆರವಣಿಗೆಯು ಕಲಾಮಂದಿರದವರೆಗೆ ವಿಜೃಂಭಣೆಯಿಂದ ಸಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಬಿ.ವಿ ನಂದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲಾ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಕೃಷ್ಣ, ಸೌಭಾಗ್ಯ, ರಮೇಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.