ಮಂಗಳವಾರ, ಮಾರ್ಚ್ 9, 2021
28 °C

ಟ್ರಾಕ್ಟರ್‌ ಓಡಿಸಿದ ನಂದಿನಿ ಜಯರಾಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್‌.ಪೇಟೆ (ಮಂಡ್ಯ ಜಿಲ್ಲೆ): ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿ ಮಂಗಳವಾರ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತಸಂಘ ಮಹಿಳಾ ರಾಜ್ಯಘಟಕದ ಅಧ್ಯಕ್ಷೆ ನಂದಿನಿ ಜಯರಾಂ ಟ್ರಾಕ್ಟರ್‌ ಓಡಿಸುವ ಮೂಲಕ ಗಮನ ಸೆಳೆದರು.

ಪಟ್ಟಣದ ಪ್ರವಾಸಿಮಂದಿರ ವೃತ್ತದಿಂದ ಪರೇಡ್‌ ಆರಂಭವಾಯಿತು. ತಲೆಗೆ ಹಸಿರು ಟವೆಲ್‌ ಕಟ್ಟಿದ್ದ ನಂದಿನಿ ಜಯರಾಂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಹಿರಂಗ ಸಭೆ ನಡೆದ ರಂಗ ಚಿತ್ರಮಂದಿರದವರೆಗೂ ಟ್ರಾಕ್ಟರ್‌ ಓಡಿಸಿಕೊಂಡು ಬಂದರು.

‘ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ರೈತರಿಗೆ ಮಾತ್ರ ಸಂಬಂಧಿಸಿಲ್ಲ. ದೇಶದಲ್ಲಿ ಅನ್ನ ತಿನ್ನುವ ಪ್ರತಿಯೊಬ್ಬ ಪ್ರಜೆಗೂ ಸಂಬಂಧಿಸಿದೆ. ಸರ್ಕಾರ ಕಾಯ್ದೆಗಳನ್ನು ವಾಪಸ್‌ ಪಡೆಯುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು