ಮಂಡ್ಯ: ಜಿಲ್ಲೆಯಲ್ಲಿ ಜೂನ್ 26ರಂದು ಅಂತರರಾಷ್ಟ್ರೀಯ ಮಾದಕ ವ್ಯಸನ ತಡೆ ದಿನದ ಪ್ರಯುಕ್ತ ಮಾದಕ, ಮದ್ಯ ಮತ್ತು ತಂಬಾಕಿನ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಜೂನ್ 26ರಂದು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾದಕ, ಮದ್ಯ ಮತ್ತು ತಂಬಾಕಿನ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ 12 ಕೆ.ಜಿ. ಗಾಂಜಾ ಪತ್ತೆಯಾಗಿರುವ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಮತ್ತು ಇದನ್ನು ಪ್ರೋತ್ಸಾಹಿಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಹೇಳಿದರು.

ಶಾಲಾ ಕಾಲೇಜಿನ ಸುತ್ತಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು, ಮದ್ಯ ಹಾಗೂ ತಂಬಾಕು ವ್ಯಾಪಾರಾಗುತ್ತಿವೆಯೇ ಎಂದು ಶಿಕ್ಷಣ ಇಲಾಖೆಯವರು ಪರಿಶೀಲಿಸಿ ವರದಿ ನೀಡಬೇಕು ಎಂದು ಶಿಕ್ಷಣ ಇಲಾಖೆಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ. ಮೋಹನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.