ಭಾನುವಾರ, ಜುಲೈ 25, 2021
28 °C

ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

ಪ್ರಜಾವಾಣಿ ವಾ‌ರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಸಾರ್ವಜನಿಕ ಸೇವೆ ಸುಧಾರಣೆಯ ಸಾಧನೆಗೆ ಭಾರತ ಸರ್ಕಾರ ನೀಡುವ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ (ಸಾಮಾನ್ಯ) ರಾಷ್ಟ್ರೀಯ ಪುರಸ್ಕಾರಕ್ಕೆ ಮಂಡ್ಯ ಜಿಲ್ಲಾ ಪಂಚಾಯಿತಿ ಆಯ್ಕೆಯಾಗಿದೆ.

2018–19ನೇ ಸಾಲಿನ ಕಾರ್ಯಕ್ಷಮತೆ ಮತ್ತು ಪ್ರಗತಿಯನ್ನು ಆಧರಿಸಿ ಸರ್ಕಾರ ಈ ಪ್ರಶಸ್ತಿ ಘೋಷಿಸಿದೆ. ಪ್ರಶಸ್ತಿಯು ₹ 50 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಅದೇ ರೀತಿ ಜಿಲ್ಲೆಯ ಇತರ ಮೂರು ಗ್ರಾಮ ಪಂಚಾಯಿತಿಗಳಿಗೂ ವಿವಿಧ ಪ್ರಶಸ್ತಿಗೆ ಆಯ್ಕೆಯಾಗಿವೆ.

ದೀನ್‌ ದಯಾಳ್‌ ಉಪಾಧ್ಯಾಯ ಸಶಕ್ತ (ವಿಷಯಾಧಾರಿತ) ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಅಣ್ಣೂರು ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 10 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಪುರಸ್ಕಾರಕ್ಕೆ ಮದ್ದೂರು ತಾಲ್ಲೂಕು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ನಮ್ಮ ಗ್ರಾಮ ನಮ್ಮ ಯೋಜನೆ ವಿಭಾಗದ ಪ್ರಶಸ್ತಿಗೆ ಶ್ರೀರಂಗಪಟ್ಟಣ ತಾಲ್ಲೂಕು ನಗುವಿನಹಳ್ಳಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ. ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ‘ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರ ಸರ್ಕಾರ ದಿನಾಂಕ ನಿಗದಿ ಮಾಡಲಿದೆ’ ಎಂದು ಜಿಪಂ ಸಿಇಒ ಕೆ.ಯಾಲಕ್ಕಿಗೌಡ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.