ನಾಗಮಂಗಲ: ‘ತಾಲ್ಲೂಕಿನಲ್ಲಿ ಯಾವುದೇ ರಸಗೊಬ್ಬರದ ಕೊರತೆಯಾಗಿಲ್ಲ. ಯೂರಿಯಾ ಸೇರಿದಂತೆ ರಾಸಾಯನಿಕ ಗೊಬ್ಬರದ ಕೃತಕ ಅಭಾವ ಸೃಷ್ಟಿಸಿದರೆ ಅಂತವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮಾರಾಟಗಾರರಿಗೆ ತಹಶೀಲ್ದಾರ್ ಆದರ್ಶ್ ಸೂಚನೆ ನೀಡಿದರು.

ಪಟ್ಟಣದ ಶಿಕ್ಷಕರ ಭವನದಲ್ಲಿ ಈಚೆಗೆ ಕೃಷಿ ಇಲಾಖೆಯಿಂದ ರಸಗೊಬ್ಬರಗಳ ಸಮರ್ಪಕ ನಿರ್ವಹಣೆ ಮತ್ತು ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳ ಬಳಕೆಗೆ ತಡೆಗಟ್ಟುವ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ನಿರೀಕ್ಷೆಯಂತೆ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಆ ನಿಟ್ಟಿನಲ್ಲಿ ಮಾರಾಟಗಾರರು ರಸಗೊಬ್ಬರಗಳ ಸಮರ್ಪಕ ನಿರ್ವಹಣೆ ಮಾಡುವ ಮೂಲಕ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಿ’ ಎಂದರು.

ನಂತರ ಮಾತನಾಡಿದ ಜಂಟಿ ಕೃಷಿ ನಿದೇಶಕ ಅಶೋಕ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬೇಕಾದ ಅಗತ್ಯ ಪ್ರಮಾಣದ ರಸಗೊಬ್ಬರದ ದಾಸ್ತಾನಿದೆ. ರೈತರು ಬೆಳೆಯುವ ಬೆಳೆಗಳಿಗೆ ಅಗತ್ಯಕ್ಕಿಂತ ಅಧಿಕ ಪ್ರಮಾಣ ಯೂರಿಯಾವನ್ನು ಬಳಸಲಾಗುತ್ತಿದ್ದು, ಅದರ ಬದಲಿಗೆ ಪೊಟ್ಯಾಷ್ಯುಕ್ತ ಕಾಂಪ್ಲೆಕ್ಸ್ ಗೊಬ್ಬರವನ್ನು ಬಳಕೆ ಮಾಡಿದರೆ ಉತ್ತಮ ಇಳುವರಿ ಸಿಗುತ್ತದೆ ಎಂದರು.

ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್ ಮಾತನಾಡಿ, ‘ರಸಗೊಬ್ಬರ ಮಾರಾಟದಲ್ಲಿ ಯಾವುದೇ ಲೋಪವಾಗದಂತೆ ಮಾರಾಟಗಾರರು ಎಚ್ಚರಿಕೆ ವಹಿಸಬೇಕು’ ಎಂದರು.

ಪಾಂಡವಪುರ ಉಪವಿಭಾಗದ ಕೃಷಿ ನಿರ್ದೇಶಕ ಭಾನುಪ್ರಕಾಶ್ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿ ಉಪಯುಕ್ತತೆಗಳ ಕುರಿತು ಮಾಹಿತಿ ನೀಡಿದರು. ರಸಗೊಬ್ಬರ ಮತ್ತು ಕೀಟನಾಶಕಗಳ ಕಾಯ್ದೆ ಕಾನೂನುಗಳ ಕುರಿತು ಜಾಗೃತದಳದ ಸಹಾಯಕ ಕೃಷಿ ನಿರ್ದೇಶಕ ಚನ್ನಕೇಶವ ಮೂರ್ತಿ ತಿಳಿಸಿದರು.

ಡಿವೈಎಸ್ಪಿ ನಿರಂಜನ್, ಕೃಷಿ ಅಧಿಕಾರಿ ಯುವರಾಜ್, ತಾಲ್ಲೂಕಿನ ರಸಗೊಬ್ಬರ ಮಾರಾಟಗಾರರು ಮತ್ತು ರೈತರು ಇದ್ದರು.

ಸಾವಯವ ಗೊಬ್ಬರ ಬಳಸಲು ಸಲಹೆ

‘ಅಧಿಕಾರಿಗಳು ರೈತರಿಗೆ ಭೂಮಿಗೆ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ರಸಗೊಬ್ಬರವನ್ನು ಬಳಸುವುದರಿಂದ ಉಂಟಾಗುವ ದುಷ್ಪರಿಣಾಮ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು. ಹಸಿರೆಲೆ ಸೆಗಣಿ ಗೊಬ್ಬರ ಮತ್ತು ಸಾವಯವ ಗೊಬ್ಬರಗಳನ್ನು ಕೃಷಿಯಲ್ಲಿ ಉಪಯೋಗಿಸುವುದರಿಂದ ಭೂಮಿಯ ಫಲವತ್ತತೆಯನ್ನು ಕಾಪಾಡಬಹುದಾಗಿದ್ದು ಮಾರಾಟಗಾರರು ರೈತರಿಗೆ ಮಾಹಿತಿ ನೀಡುವ ಕೆಲಸವನ್ನು ಮಾಡಬೇಕು’ ಎಂದು ತಹಶೀಲ್ದಾರ್ ಆದರ್ಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.