ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಲಗೂರು: ಶ್ರೀ ಬಸವೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ ಇಂದು

Published 21 ಫೆಬ್ರುವರಿ 2024, 13:05 IST
Last Updated 21 ಫೆಬ್ರುವರಿ 2024, 13:05 IST
ಅಕ್ಷರ ಗಾತ್ರ

ಹಲಗೂರು: ಸಮೀಪದ ಮಾರಗೌಡನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ ಮತ್ತು ವಿಮಾನ ಗೋಪುರ ಕಳಶಾರೋಹಣ ಕಾರ್ಯಕ್ರಮ ಫೆ.22 ರಂದು ನಡೆಯಲಿದೆ.

ಗುರುವಿನಪುರ ಬೃಹನ್ಮಠದ ಪೀಠಾಧ್ಯಕ್ಷ  ಜಗದೀಶ ಶಿವಾಚಾರ್ಯ ಸ್ವಾಮಿಜೀ ನೇತೃತ್ವದಲ್ಲಿ ಬೆಳಿಗ್ಗೆ 4 ರಿಂದ 4:20 ಗಂಟೆಯ ಸಮಯದಲ್ಲಿ ಶ್ರೀ ವಿನಾಯಕ ಮತ್ತು ವೀರಭದ್ರೇಶ್ವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ನಡೆಯಲಿದೆ. ನಂತರ ಸ್ವಾಮಿಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ರಾಜೋಪಚಾರ, ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ಗ್ರಾಮದಲ್ಲಿ ಜೀರ್ಣೋದ್ಧಾರ ಗೊಳಿಸಲಾಗಿರುವ ಬಸವೇಶ್ವರ ಸ್ವಾಮಿ ದೇವಾಲಯವನ್ನು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಉದ್ಘಾಟಿಸಲಿದ್ದಾರೆ. ಮಳವಳ್ಳಿ ತಹಶೀಲ್ದಾರ್ ಕೆ.ಎನ್.ಲೋಕೇಶ್, ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್. ಶ್ರೀಧರ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಗುರುವಾರ ರಾತ್ರಿ 8 ಗಂಟೆಗೆ ಕಲಾವಿದರಿಂದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕವನ್ನು ಅಭಿನಯಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT