ಬುಧವಾರ, ಮೇ 12, 2021
17 °C

ಶ್ರೀರಂಗನಾಥ ದೇಗುಲಕ್ಕೆ ಪ್ರವೇಶ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ.

ಕೇಂದ್ರ ಪುರಾತತ್ವ ಇಲಾಖೆ ಆದೇಶದಂತೆ ಮೇ 15ರ ವರೆಗೆ ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವಾಲಯದಲ್ಲಿ ಸಾಂಪ್ರದಾಯಿಕ ಪೂಜೆಗಳು ವಾಡಿಕೆಯಂತೆ ನಡೆಯಲಿವೆ ಎಂದು ಅರ್ಚಕರು ಹೇಳಿದ್ದಾರೆ.

ಭಾರತೀಯ ಪುರಾತತ್ವ ಮತ್ತು ಸರ್ವೇಕ್ಷಣಾ (ಎಎಸ್‌ಐ) ಅಡಿಯಲ್ಲಿ ಬರುವ ಪಟ್ಟಣದಲ್ಲಿರುವ ಸ್ಮಾರಕಗಳಿಗೂ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಟಿಪ್ಪು ಬೇಸಿಗೆ ಅರಮನೆ, ಗುಂಬಸ್‌, ಕರ್ನಲ್‌ ಬೇಯ್ಲಿ ಡಂಜನ್‌, ಇನ್‌ಮಾನ್ಸ್‌ ಡಂಜನ್‌, ಟಿಪ್ಪು ಮಡಿದ ಸ್ಥಳ ಸೇರಿದಂತೆ 10 ಸ್ಮಾರಕಗಳಿದ್ದು, ಪ್ರವಾಸಿಗರ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್‌ ವ್ಯಾಪಿಸುತ್ತಿರುವ ಕಾರಣ ಗಂಜಾಂನ ಪ್ರಸಿದ್ಧ ನಿಮಿಷಾಂಬಾ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಪಟ್ಟಣದ ಗಂಗಾಧರೇಶ್ವರ, ಜ್ಯೋತಿರ್ಮಹೇಶ್ವರ ಇತರ ದೇವಾಲಯಗಳಲ್ಲಿ ಕೂಡ ಭಕ್ತರು ತೀರಾ ಕಡಿಮೆ ಕಂಡು ಬಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು