ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟ–ತಿಂಡಿಗೂ ಹಣವಿಲ್ಲ, ಮಕ್ಕಳಿಗೆ ಹಾಲಿಲ್ಲ: ಮಹಿಳೆಯರ ಅಳಲು

Last Updated 20 ಮೇ 2020, 16:34 IST
ಅಕ್ಷರ ಗಾತ್ರ

ಕೆ.ಆರ್.ಪೇಟೆ: ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಮಕ್ಕಳೊಂದಿಗೆ ಕ್ವಾರಂಟೈನ್‌ನಲ್ಲಿರುವ ಮಹಿಳೆಯ ರಿಬ್ಬರು ಸಂಕಷ್ಟಕ್ಕೆ ಸಿಲುಕಿದ್ದು ಸಹಾಯಕ್ಕೆ ಮೊರೆ ಇಟ್ಟಿದ್ದಾರೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಧಿಕಾರಿಗಳ ಸೂಚನೆಯ ಮೇರೆಗೆ 9 ದಿನಗಳಿಂದ ಕೆ.ಆರ್‌.ಪೇಟೆಯ ಪ್ರೀತಂ ಹೋಟೆಲ್‌ನಲ್ಲಿ ತಂಗಿದ್ದೇವೆ. ಅಲ್ಲಿಂದ ಇಲ್ಲಿಯವರೆಗೂ ಅಧಿಕಾರಿಗಳು ನಮ್ಮ ಕಡೆ ತಿರುಗಿ ನೋಡಿಲ್ಲ. ಮಕ್ಕಳ ಹಾಲಿಗೂ ಹಣವಿಲ್ಲದೇ ಪರಿತಪಿಸುತ್ತಿದ್ದೇವೆ. ಹೋಟೆಲ್‌ನವರು ದಿನಕ್ಕೆ ₹ 2 ಸಾವಿರ ಹೋಟೆಲ್‌ ಬಾಡಿಗೆ ಕೇಳುತ್ತಿದ್ದಾರೆ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

ಚುನಾವಣೆ ಸಮಯದಲ್ಲಿ ಮಾತ್ರ ನಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಕಷ್ಟ ಕಾಲದಲ್ಲಿ ನಮಗೆ ಯಾರೂ ಸಹಾಯ ಮಾಡುತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರು, ಬಿ.ವೈ.ವಿಜಯೇಂದ್ರ ಅವರು ನಮಗೆ ಸಹಾಯ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT