ಸಂತೇಬಾಚಹಳ್ಳಿ: ರೈತರು ಹೈನುಗಾರಿಕೆ ಮತ್ತು ಕೃಷಿಯಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿ ಆರ್ಥಿಕವಾಗಿ ಅಭಿವೃದ್ಧಿಹೊಂದಬೇಕು. ಸಹಕಾರ ಸಂಘಗಳಲ್ಲಿ ರಾಜಕೀಯ ಮಾಡದೆ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಮನ್ಮುಲ್ ನಿರ್ದೇಶಕ ಡಾಲು ರವಿ ಹೇಳಿದರು.

ಸಂತೇಬಾಚಹಳ್ಳಿ ಹೋಬಳಿಯ ಮಾರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ರೈತರು ಕೃಷಿಜೊತೆಗೆ ಹೈನುಗಾರಿಕೆಯಿಂದ ಆದಾಯ ಗಳಿಸುತ್ತಾರೆ. ಹೈನುಗಾರಿಕೆ ಅಭಿವೃದ್ಧಿಗಾಗಿ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು. ಉಪ ಕಸುಬಾಗಿ ಕುರಿ, ಮೇಕೆ ಸಾಕಣೆ ಮಾಡಬೇಕು. ಕಡಿಮೆ ಅವಧಿಯಲ್ಲಿ ಹೆಚ್ಚು ಆದಾಯ ಗಳಿಸಬಹುದು. ಡೇರಿಯಲ್ಲಿ ಚುನಾವಣೆ ನಡೆಸದೆ ಅವಿರೋಧ ಆಯ್ಕೆ ಮಾಡಬೇಕು ಎಂದರು.

ಸಾಧಕ ವಿದ್ಯಾರ್ಥಿಗಳ ವಿದ್ಯಾರ್ಥಿಗಳ ಪೋಷಕರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷೆ ನೇತ್ರಾವತಿ, ನಿರ್ದೇಶಕರಾದ ಭಾಗ್ಯಮ್ಮ, ಪ್ರೇಮ, ಲಕ್ಷ್ಮಮ್ಮ, ಪಾರ್ವತಿ, ವಿಮಲಾ, ವಸಂತ, ಮಮತಾ, ಸುಂದ್ರಮ್ಮ, ಶೋಭಾ, ಗ್ರಾಮಸ್ಥರಾದ ಶಂಕರ್, ದಿನೇಶ್,ದರ್ಮೇಶ್, ರಘು, ಹರೀಶ್, ವಿರೂಪಾಕ್ಷ, ನಾಗೇಶ್, ವೇದಮೂರ್ತಿ, ಮಾರ್ಗವಿಸ್ತರಣಧಿಕಾರಿ ಗುರುರಾಜ್ ಸುರಗಿಹಳ್ಳಿ, ಕಾರ್ಯದರ್ಶಿ ಗೀತಾ, ಸೋಮಶೇಖರ್, ಸಿಬ್ಬಂದಿ ಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.