ಗುರುವಾರ , ಫೆಬ್ರವರಿ 25, 2021
17 °C

ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮದ್ದೂರು: ‘ಶಾಸಕ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ. ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ’ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ತಾಲ್ಲೂಕಿನ ಸೋಮಹಳ್ಳಿಯಲ್ಲಿ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ  ಅವರ ಸಹೋದರ ಎಸ್.ಎಂ.ಶಂಕರ್ ಅವರ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಪರೇಷನ್ ಕಮಲದಿಂದ ಸಮ್ಮಿಶ್ರ ಸರ್ಕಾರವನ್ನು ಅಭದ್ರ ಮಾಡಬಹುದು ಎಂದು ಬಿಜೆಪಿಯವರು ಅಂದು ಕೊಂಡರೆ ಅದು ಅವರ ಭ್ರಮೆ. ರಾಜೀನಾಮೆ ನೀಡಿರುವ ಶಾಸಕರ ಮನವೊಲಿಸಲಾಗಿದೆ ಅವರು ಶೀಘ್ರದಲ್ಲೆ ರಾಜೀನಾಮೆಯನ್ನು ವಾಪಸ್ ಪಡೆಯಲ್ಲಿದ್ದಾರೆ. ಅವರು ರಾಜೀನಾಮೆ ನೀಡಲು ಯಾರು ಕಾರಣ ಎಂಬುದರ ಬಗ್ಗೆ ಮಾಹಿತಿ ಇದೆ. ಇದರಿಂದ ಬಿಜೆಪಿಯವರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ’ ಎಂದು ತಿಳಿಸಿದರು.

ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿ.ಎಸ್.ಎಂ.ಶಂಕರ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಕಾರ್ಯಕ್ರಮದಲ್ಲಿ ಹಾಜರಿದ್ದ ತಮ್ಮ ರಾಜಕೀಯ ಗುರು ಎಸ್.ಎಂ. ಕೃಷ್ಣರವರ ಕಾಲಿಗೆ ನಮಸ್ಕರಿಸಿ ಅವರ ಜೊತೆ ಭೋಜನ ಮಾಡಿದರು.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು