ಮಳವಳ್ಳಿ: ‘ಸರ್ಕಾರದ ಗ್ಯಾರಂಟಿ ಯೋಜನೆಗಳು ಅರ್ಹ ಎಲ್ಲ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅನುಷ್ಠಾನ ಸಮಿತಿ ಕಾರ್ಯನಿರ್ವಹಿಸಬೇಕು’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಮಾದೇಶ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಸದಸ್ಯರನ್ನು ಅಭಿನಂದಿಸಿ, ನಂತರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.

‘ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಸಾರ್ವಜನಿಕರ ಸಂಪರ್ಕದೊಂದಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿನ ಏನಾದರೂ ಲೋಪವಿದ್ದರೆ ಅದನ್ನು ಸರಿಪಡಿಸುವ ಕಾರ್ಯ ಮಾಡಬೇಕು. ಅನುಷ್ಠಾನ ಸಮಿತಿ ಪರಿಣಾಮಕಾರಿ ಜವಾಬ್ದಾರಿ ನಿರ್ವಹಿಸಬೇಕು. ಯೋಜನೆಗಳ ಸಂಬಂಧ ದೂರುಗಳು ಇದ್ದರೆ ಅವುಗಳನ್ನು ಸಮಿತಿಯ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಮಾದೇಶ್, ಸದಸ್ಯರಾದ ಟಿ.ಸಿ.ಚನ್ನಯ್ಯ, ಎಸ್.ಎಂ.ಸುರೇಶ್, ನಾಗೇಶ್, ಶಿವಣ್ಣ, ನಾಗೇಂದ್ರ, ಅರ್ಷದ್ ಪಾಷಾ, ಜಿ.ಬಿ.ರಾಜೇಶ್, ಕೀರ್ತನ್ ಕುಮಾರ್, ಎಚ್.ಸಿ.ಹರೀಶ್, ಎಂ.ಎಸ್.ಸಾಗರ್, ಚೇತನ್ ನಾಯಕ್, ಸಿದ್ದರಾಜು, ದಿವ್ಯಾ, ಚಂದ್ರಮ್ಮ ಅವರನ್ನು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಮನ್ಮುಲ್ ನಿರ್ದೇಶಕ ಆರ್.ಎನ್.ವಿಶ್ವಾಸ್, ಟಿಎಪಿಸಿಎಂಎಸ್ ನಿರ್ದೇಶಕರಾದ ಕೆ.ಜೆ.ದೇವರಾಜು, ಎಂ.ಲಿಂಗರಾಜು, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಎಚ್.ಕೆ.ಕೃಷ್ಣಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.