ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿ ಕುರುಬಹಳ್ಳಿ ಗ್ರಾಮದ ಶಿಕ್ಷಕ ಧರ್ಮರಾಜಗೌಡ ಮತ್ತು ರೂಪಾ ದಂಪತಿ ಪುತ್ರ ನೂತನ ಕೃಷ್ಣ ಭೈರವೇಶ್ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದು ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಬಿ.ಎನ್.ವೈ.ಎಸ್.ನಲ್ಲಿ 4ನೇ ರ್ಯಾಂಕ್, ‘ಬಿ’ ಫಾರ್ಮಾ ಹಾಗೂ ‘ಡಿ’ ಫಾರ್ಮಾದಲ್ಲಿ 5ನೇ ರ್ಯಾಂಕ್, ಬಿಎಸ್ಸಿ ನರ್ಸಿಂಗ್ ಹಾಗೂ ವೆಟರ್ನರಿ ಸೈನ್ಸ್ನಲ್ಲಿ 6ನೇ ರ್ಯಾಂಕ್ ಗಳಿಸಿ ಪ್ರಶಂಸೆಗೆ ಪಾತ್ರನಾಗಿದ್ದಾರೆ.

ಸಿಇಟಿ ಪರೀಕ್ಷೆಯ ಫಲಿತಾಂಶ ಕುರಿತು ಮಾತನಾಡಿದ ವಿದ್ಯಾರ್ಥಿ ನೂತನ ಕೃಷ್ಣ ಭೈರವೇಶ್, ‘ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಎಂಬಿಬಿಎಸ್ ಪ್ರವೇಶ ಪಡೆಯುವುದು ಮುಂದಿನ ಗುರಿಯಾಗಿದೆ’ ಎಂದು ಹೇಳಿದರು.

ಶಿಕ್ಷಕ ದಂಪತಿ ಮಗನ ಸಾಧನೆಗೆ ಸಂತಸ ವ್ಯಕ್ತಪಡಿಸಿದರು. ವಿದ್ಯಾರ್ಥಿಯನ್ನು ತಾಲ್ಲೂಕಿನ ಗಣ್ಯರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.