ಶುಕ್ರವಾರ, ಆಗಸ್ಟ್ 12, 2022
27 °C

ಕಲಾವಿದ ನಾರಾಯಣಗೌಡ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ಗ್ರಾಮದ ಗಮಕ ಕಲಾವಿದ ನಾರಾಯಣಗೌಡ (78) ಭಾನುವಾರ ರಾತ್ರಿ ನಿಧನರಾದರು.

ಅವರಿಗೆ ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಸ್ವಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.

ನಾರಾಯಣಗೌಡ ಅವರು ಕುವೆಂಪು ವಿರಚಿತ ‘ರಾಮಾಯಣ ದರ್ಶನಂ’ ಹಾಗೂ ಇತರ ಕೃತಿಗಳನ್ನು ನಿರರ್ಗಳವಾಗಿ ವಾಚಿಸುತ್ತಿದ್ದರು. ಮಹಾ ಛಂದಸ್ಸಿನಲ್ಲಿ ಪ್ರೌಢಿಮೆ ಹೊಂದಿದ್ದರು.

ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ‘ಚುಂಚಶ್ರೀ’, ನಾಡಪ್ರಭು ಕೆಂಪೇಗೌಡ, ಕುವೆಂಪು ಕಲಾನಿಕೇತನ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.