ಮಳವಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪೌರ ನೌಕರರನ್ನು ಬೆಂಬಲಿಸಿ ಪಟ್ಟಣದ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನೌಕರರೊಡನೆ ಸಾಂಕೇತಿಕವಾಗಿ ಧರಣಿ ನಡೆಸಿದರು.

ಪುರಸಭೆ ಮುಂದೆ ಜಮಾಯಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಎಲ್ಲ ನೌಕರರು ಕೆಲಕಾಲ ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿದರು.

‘ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆ ನೌಕರರು ರಾಜ್ಯ ಸರ್ಕಾರಿ ನೌಕರರು ಎಂದು ಪರಿಗಣಿಸುವುದರ ಜೊತೆಗೆ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು, ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್ವೈಜರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.

‘ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದರ ಜೊತೆಗೆ ನೌಕರರನ್ನು ಕಾಯಂ ಗೊಳಿಸಬೇಕು ಹಾಗೂ ಎಲ್ಲ ನೌಕರರಿಗೂ ಎಸ್ಎಫ್ಸಿ ಮುಕ್ತ ನಿಧಿಯಿಂದ ವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಿ ಸರ್ಕಾರ ತಮ್ಮನ್ನು ಸರ್ಕಾರಿ ನೌಕಕರು ಎಂದು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.