ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ದಾಖಲೆ ಇಲ್ಲದ ₹ 99 ಲಕ್ಷ ಹಣ ಜಪ್ತಿ

Published 18 ಮಾರ್ಚ್ 2024, 16:27 IST
Last Updated 18 ಮಾರ್ಚ್ 2024, 16:27 IST
ಅಕ್ಷರ ಗಾತ್ರ

ಮಂಡ್ಯ: ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ, ಮದ್ದೂರು ತಾಲ್ಲೂಕಿನ ಕೊಂಗಬೋರನದೊಡ್ಡಿ ಬಳಿಯ ಚೆಕ್‌ಪೋಸ್ಟ್‌ ಮೂಲಕ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 99.20 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ಸೋಮವಾರ ಜಪ್ತಿ ಮಾಡಿದ್ದಾರೆ.

ಗಿರೀಶ್ ಎಂಬುವವರು ಬೆಂಗಳೂರಿನಿಂದ ಹುಂಡೈ ಕ್ರೆಟಾ ಕಾರ್‌ನಲ್ಲಿ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದಾಗ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಆರಂಭವಾಗಿರುವ ಚುನಾವಣಾ ಚೆಕ್‌ಪೋಸ್ಟ್‌ ಸಿಬ್ಬಂದಿ ತಡೆದು ತಪಾಸಣೆ ನಡೆಸಿದರು. ಈ ವೇಳೆ ಚೀಲದಲ್ಲಿ ತುಂಬಿಟ್ಟಿದ್ದ ನಗದು ಪತ್ತೆಯಾಯಿತು.

ಈ ಬಗ್ಗೆ ಗಿರೀಶ್‌ ಅವರನ್ನು ಚುನಾವಣಾಧಿಕಾರಿಗಳು ಪ್ರಶ್ನಿಸಿದಾಗ ಸೂಕ್ತ ಉತ್ತರ, ದಾಖಲೆ ನೀಡದ ಪರಿಣಾಮ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿಗಳು ಮದ್ದೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಳವಳ್ಳಿ ಡಿವೈಎಸ್‌ಪಿ ಕೃಷ್ಣಪ್ಪ, ತಹಶೀಲ್ದಾರ್ ಕೆ.ಎಸ್.ಸೋಮಶೇಖರ್, ಮದ್ದೂರು ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಕೆ.ಆರ್.ಪ್ರಸಾದ್, ಚುನಾವಣಾಧಿಕಾರಿ ಲೋಕನಾಥ್ ಸ್ಥಳದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT