ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶ್ರೀರಂಗಪಟ್ಟಣ ದಸರಾ ಒಂದೇ ದಿನ’

Last Updated 10 ಅಕ್ಟೋಬರ್ 2020, 3:28 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಈ ಬಾರಿ ಕೊರೊನಾ ಸಮಸ್ಯೆ ತೀವ್ರವಾಗಿ ಕಾಡುತ್ತಿರುವುದರಿಂದ ಶ್ರೀರಂಗಪಟ್ಟಣ ದಸರಾ ಆಚರಣೆ ಅ.23ರಂದು ಒಂದು ದಿನ ಮಾತ್ರ ನಡೆಯಲಿದೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ತಿಳಿಸಿದರು.

ಅಂದು ಸಂಜೆ 4 ಗಂಟೆಗೆ ಸಮೀಪದ ಕಿರಂಗೂರು ವೃತ್ತದ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ಇತರ ಸಾಂಪ್ರದಾಯಿಕ ಆಚರಣೆಗಳು ಜರುಗುತ್ತವೆ. ಬನ್ನಿ ಮಂಟಪದಿಂದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ವರೆಗೆ ಮೆರವಣಿಗೆಯಲ್ಲಿ ತರಲಾಗುತ್ತದೆ. ಬನ್ನಿ ಮಂಟಪದಲ್ಲಿ ನಡೆಯುವ ಧಾರ್ಮಿಕ ಆಚರಣೆಗಳು ಮತ್ತು ಉತ್ಸವದಲ್ಲಿ ಜನ ದಟ್ಟಣೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಲಿದ್ದಾರೆ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಮಾತನಾಡಿ, ’ದಸರಾ ಉತ್ಸವದಲ್ಲಿ ಜಾನಪದ ಕಲಾ ತಂಡಗಳು, ಸ್ತಬ್ದ ಚಿತ್ರಗಳು ಇರುವುದಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ರದ್ದು ಮಾಡಲಾಗಿದೆ. ಸಾಂಕೇತಿಕವಾಗಿ ಒಂದೆರಡು ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು. ತಹಶೀಲ್ದಾರ್‌ ಎಂ.ವಿ. ರೂಪಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಭೈರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT