ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಲಿಂಗೇಶ್ವರ ಕ್ಷೇತ್ರ ಅಭಿವೃದ್ಧಿಗೆ ಕ್ರಮ

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿಕೆ, ಪ್ರವಾಸಿ ತಾಣವಾಗಿ ಅಭಿವೃದ್ಧಿ
Last Updated 13 ಡಿಸೆಂಬರ್ 2019, 8:47 IST
ಅಕ್ಷರ ಗಾತ್ರ

ಕೆರಗೋಡು: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಎದುರು ಇರುವ ಕೆರೆಯನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣ ಮಾಡಲು ಯೋಜನೆ ರೂಪಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದರು.

ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಎದುರಿನ ಕೆರೆಯನ್ನು ವೀಕ್ಷಿಸಿದರು.

‘ಪ್ರವಾಸೋದ್ಯಮ ಇಲಾಖೆ ಮೂಲಕ ಕೆರೆ ಸ್ವಚ್ಛಗೊಳಿಸುವುದು, ಏರಿಯ ಮೇಲೆ ಪಥ ನಿರ್ಮಿಸಿ ಸುತ್ತಲೂ ತಂತಿ ಬೇಲಿ ಅಳವಡಿಸಲಾಗುವುದು. ಈ ಮೂಲಕ ಸಾರ್ವಜನಿಕರ ವಾಯುವಿಹಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ’ ಎಂದರು.

ದೇವಸ್ಥಾನ ಪಕ್ಕದ ಸಮುದಾಯ ಭವನ ಶಿಥಿಲಾವಸ್ಥೆಯಲ್ಲಿದ್ದು, ಅದನ್ನು ಕೆಡವಿ ನೂತನ ಸಮುದಾಯ ಭವನ ನಿರ್ಮಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಡಿಕೆ: ಕೆರಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಲಿನ 80 ಹಳ್ಳಿಗಳ ಜನರು ಬರುತ್ತಾರೆ. ವೈದ್ಯರು, ಪ್ರಯೋಗ ಶಾಲೆ ಮತ್ತು ಸಿಬ್ಬಂದಿ ಕೊರತೆ ಇದೆ. ಇದನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ‘ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಇರುವ ಜಾಗ, ಸೌಲಭ್ಯಗಳ ಕುರಿತು ಮಾಹಿತಿ ನೀಡಿದರೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದರು.

ತಾ.ಪಂ ಸದಸ್ಯ ಪ್ರಶಾಂತ್‌ಬಾಬು, ಗ್ರಾಮ ಪಂಚಾಯಿತಿ ಸದಸ್ಯ ಶ್ರೀಕಾಂತೇಗೌಡ, ಮುಖಂಡರಾದ ವ್ಯೋಮಕೇಶವ, ಶಿವಲಿಂಗೇಗೌಡ, ಅನಂತರಾವ್, ರಂಗಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT