ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಂಡವಪುರ: 2ನೇ ಹಂತದ ಲಸಿಕೆ

ಲಸಿಕೆ ವ್ಯವಸ್ಥೆ ಪರಿಶೀಲನೆ ನಡೆಸಿ ಸೂಚನೆ ನೀಡಿದ ಶಾಸಕ ಸಿ.ಎಸ್.ಪುಟ್ಟರಾಜು
Last Updated 11 ಮೇ 2021, 4:17 IST
ಅಕ್ಷರ ಗಾತ್ರ

ಪಾಂಡವಪುರ: ಪಟ್ಟಣದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದ 2ನೇ ಹಂತದ ಕೋವಿಶೀಲ್ಡ್ ಲಸಿಕೆಯನ್ನು ಮೇ 10ರಿಂದ ಪಟ್ಟಣದ ಸ‌ರ್ಕಾರಿ ಪಿಯು ಕಾಲೇಜಿಗೆ ವರ್ಗಾಯಿಸಲಾಗಿದ್ದು, ನೋಂದಣಿ ಮಾಡಿಸಿಕೊಂಡ ನಂತರ ಲಸಿಕೆ ಹಾಕಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.

ಇಬ್ಬರು ಸಾವು: ತಿಮ್ಮನಕೊಪ್ಪಲು ಗ್ರಾಮದ ಗ್ರಾ.ಪಂ.ಸದಸ್ಯ ಹಾಗೂ ಚಿಕ್ಕಾಡೆ ಗ್ರಾಮದ ವ್ಯಕ್ತಿ ಕೋವಿಡ್‌ನಿಂದ ನಿಧನರಾಗಿದ್ದಾರೆ.

ಬೈಕ್‌ ವಶ: ನಿಯಮ ಉಲ್ಲಂಘಿಸಿ ತಿರುಗಾಡುತ್ತಿದ್ದ ಬೈಕ್‌ ಸವಾರರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. 30ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದರು. ಸಿಪಿಐ ಕೆ.ಪ್ರಭಾಕರ್ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆ, ಸರ್ಕಲ್‌ ಹಾಗೂ ಬೀದಿಗಳಲ್ಲಿ ಸಂಚರಿಸಿದ ಪೊಲೀಸರು ಲಾಕ್‌ಡೌನ್‌ ನಿಯಮ ಪಾಲಿಸದ ಜನರ ಮೇಲೆ ಕ್ರಮವಹಿಸಿದರು.

ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿದ್ದವು.

ಅಧಿಕಾರಿಗಳ ಸಭೆ: ಶಾಸಕ ಸಿ.ಎಸ್.ಪುಟ್ಟರಾಜು ಸೋಮವಾರ ಅಧಿಕಾರಿ ಗಳ ಸಭೆ ನಡೆಸಿದರು. ಕೊರೊನಾ ತಡೆಗಟ್ಟುವಿಕೆಗೆ ಅಧಿಕಾರಿಗಳು ಅನುಸರಿ ಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದರು. ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರೊನಾ ಲಸಿಕೆ ಕೇಂದ್ರವಾಗಿ ಮಾರ್ಪಟ್ಟಿರುವ ಸರ್ಕಾರಿ ಪಿಯು ಕಾಲೇಜಿಗೆ ಭೇಟಿ ನೀಡಿ ಲಸಿಕೆ ವ್ಯವಸ್ಥೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್, ತಾ.ಪಂ.ಇಒ ಆರ್.ಪಿ.ಮಹೇಶ್, ಪುರಸಭೆ ಮುಖ್ಯಾಧಿ ಕಾರಿ ಮಂಜುನಾಥ್, ತಾಲ್ಲೂಕು ಆರೋಗ್ಯಾ ಧಿಕಾರಿ ಡಾ.ಸಿ.ಎ. ಅರವಿಂದ್, ಸಿಪಿಐ ಕೆ.ಪ್ರಭಾಕರ್ ಇದ್ದರು.

ಬಿಜೆಪಿ ಮುಖಂಡರ ಭೇಟಿ: ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ಹಾಸ್ಟಲ್‌ನ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಜುನಾಥ್ ಮಾತನಾಡಿ, ಸರ್ಕಾರ ನೀಡುವ ಸೌಲಭ್ಯಗಳಲ್ಲಿ ವ್ಯತ್ಯಾಸ ಉಂಟಾದರೆ ಅದನ್ನು ಸರ್ಕಾರದ ಗಮನಕ್ಕೆ ತಂದು ಸರಿಪಡಿಸಲಾಗುವುದು. ಸೋಂಕಿತರಿಗೆ ಯಾವುದೇ ರೀತಿಯ ಕೊರತೆ ಕಾಣದಂತೆ ನೋಡಿಕೊಳ್ಳಬೇಕು ಎಂದು ಕೇರ್ ಸೆಂಟರ್ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಬಿಜೆಪಿ ಮುಖಂಡರಾದ ಬೀರಶೆಟ್ಟಹಳ್ಳಿ ಬಾಲಗಂಗಾಧರ್, ಸುಂಕಾತೊಣ್ಣೂರು ಗಿರೀಶ್, ಕೆನ್ನಾಳು ಮಂಜುನಾಥ್, ಬಳೇ ಅತ್ತಿಗುಪ್ಪೆ ಕೈಲಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT