ಪಾಂಡವಪುರ (ಮಂಡ್ಯ ಜಿಲ್ಲೆ): ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನರಾಂ ಭಾವಚಿತ್ರ ಇಟ್ಟಿರುವುದಕ್ಕೆ ಬಲಗೈ ಸಮುದಾಯದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರಿಂದ ಅಂಬೇಡ್ಕರ್ ಜಯಂತಿ ರದ್ದಾಯಿತು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಬಾಬು ಜಗಜೀವನರಾಂ ಭಾವಚಿತ್ರವನ್ನೂ ಇಡಲಾಗಿತ್ತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಲಗೈ ಸಮುದಾಯದ ಮುಖಂಡರು, ‘ಏ.5ರಂದು ಜಗಜೀವನರಾಂ ಭಾವಚಿತ್ರವಿಟ್ಟು ಅವರ ಜಯಂತಿ ಆಚರಿಸಲಾಗಿದೆ. ಅಂಬೇಡ್ಕರ್ ಜಯಂತಿಯ ದಿನ ಅಂಬೇಡ್ಕರ್ ಭಾವಚಿತ್ರದ ಜೊತೆಗೆ ಜಗಜೀವನರಾಂ ಭಾವಚಿತ್ರ ಇಡುವ ಅಗತ್ಯವಾದರೂ ಏನು’ ಎಂದು ಪ್ರಶ್ನಿಸಿದರು.

‘ಜಗಜೀವನರಾಂ ಭಾವಚಿತ್ರ ಇಟ್ಟಿರುವುದು ನನ್ನ ಗಮನಕ್ಕೆ ಬಂದಿಲ್ಲ’ ಎಂದು ತಹಶೀಲ್ದಾರ್ ಬಸವರಡ್ಡೆಪ್ಪ ರೋಣದ ಸಭೆಗೆ ತಿಳಿಸಿದರು. ಬಳಿಕ ಬಲಗೈ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಲು ಮುಂದಾದರು.

‘ಮಾದಾರ ಮಹಾಸಭಾದ ಮುಖಂಡರು, ಜಗಜೀವನರಾಂ ಭಾವಚಿತ್ರವನ್ನು ತಂದು ಇಡಬೇಕು ಎಂದು ಒತ್ತಾಯಿಸಿದ್ದರಿಂದ ಅವರ ಭಾವಚಿತ್ರವನ್ನು ಇಡಬೇಕಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಈ ವೇಳೆ ಅಧಿಕಾರಿಗಳು ಮತ್ತು ಬಲಗೈ ಮುಖಂಡರ ನಡುವೆ ವಾಗ್ವಾದ ನಡೆಯಿತು. ಅಲ್ಲದೆ ಎಡಗೈ ಮತ್ತು ಬಲಗೈ ಸಮುದಾಯದ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಮತ್ತಷ್ಟು ಕೋಪಗೊಂಡ ಬಲಗೈ ಮುಖಂಡರು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕರಿಸಿ, ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಶ್ರೀರಂಗಪಟ್ಟಣ ಸರ್ಕಲ್ ಇನ್ಸ್ಪೆಕ್ಟರ್ ಕುಮಾರ್, ಪಾಂಡವಪುರ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಅವರು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಿಸಿದರು.

ಬಳಿಕ ದೂರವಾಣಿಯ ಮೂಲಕ ಮಾತನಾಡಿದ ಜಿಲ್ಲಾಧಿಕಾರಿ ಕುಮಾರ ಅವರು ‘ಏ.17ರ ಬಳಿಕ ಪಾಂಡವಪುರ ಪಟ್ಟಣಕ್ಕೆ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮತ್ತೊಂದು ದಿನ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.