ಪಾಂಡವಪುರ: ತಾಲ್ಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ₹3.20ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.

‘ಗ್ರಾಮದ ಆಸ್ಪತ್ರೆಯ ಹೊಸಕಟ್ಟಡದಲ್ಲಿ ರೋಗಿಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವ ವೈದ್ಯರ ಕೊಠಡಿಗಳು, ಲ್ಯಾಬ್, ಔಷಧ ಕೊಠಡಿಗಳು, ಶೌಚಾಲಯಗಳು ಸೇರಿದಂತೆ ಇನ್ನಿತರ ಕೊಠಡಿಗಳನ್ನು ನಿರ್ಮಾಣ ಮಾಡುವುದರ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನರಿಗೆ ದೊರಕಬೇಕಾದ ಎಲ್ಲಾ ಸೌಲಭ್ಯಗಳು ದೊರೆಯುವಂತೆ ಮಾಡಲಾಗುವುದು’ ಎಂದರು.

ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನರ್ಸ್ ಒಬ್ಬರನ್ನು ತಕ್ಷಣದಲ್ಲಿ ನೇಮಿಸುವ ಕ್ರಮವಹಿಸಲಾಗುವುದು. ವಾರಕ್ಕೆ ಎರಡು ದಿನಗಳು ಲ್ಯಾಬ್ ಟೆಕ್ನಿಷಿಯನ್ ಅವರ ಸೇವೆಯನ್ನು ನಿಯೋಜಿಸಲಾಗುವುದು’ ಎಂದು ಭರವಸೆ ನೀಡಿದರು.

ಪಟ್ಟಣದ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ಮತ್ತು ಹೆರಿಗೆ ವಿಭಾಗವನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡುವ ಕ್ರಮವಹಿಸಲಾಗಿದೆ. ಉಪ ವಿಭಾಗೀಯ ಆಸ್ಪತ್ರೆಯನ್ನು 150 ಹಾಸಿಗೆಗಳ ಮೇಲ್ದರ್ಜೆಗೇರಿಸಲು ಕ್ರಮವಹಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ. ಮೋಹನ್ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ. ಅರವಿಂದ್, ವೈದ್ಯ ಡಾ.ಮಣಿ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್. ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ವೈ.ಪಿ. ಮಂಜುನಾಥ್, ರೈತ ಸಂಘದ ಮುಖಂಡರಾದ ಕೆ.ಟಿ. ಗೋವಿಂದೇಗೌಡ, ಬಿ.ಟಿ. ಶಿವಣ್ಣ, ಶ್ಯಾದನಹಳ್ಳಿ ಚಲುವರಾಜು, ಡಿ.ಕೆ. ಕೃಷ್ಣೇಗೌಡ, ಸಿದ್ದೇಗೌಡ, ಮಹದೇವು, ಮರಿದೇವು, ರಾಮಣ್ಣ, ದೇವರಾಜು, ರೈತ ಸಂಘದ ಮಹಿಳಾ ಘಟಕದ ಸದಸ್ಯೆ ಎಂಜಿನಿಯರ್ ರೂಪ ಅರಳಕುಪ್ಪೆ , ಪಿಡಿಒ ರಘು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-40-1877500421

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.