ಪಾಂಡವಪುರ: ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಜನ–ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೇಸಿಗೆ ಹಿನ್ನೆಲೆಯಲ್ಲಿ ಅಗತ್ಯಕ್ರಮ ಕೈಗೊಳ್ಳುವ ಸಲ್ಲುವಾಗಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಮೇಲುಕೋಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಅಧಿಕಾರಿಗಳ ಟಾಸ್ಕ್ ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ ನೀರಿನ ಬವಣೆ ಎದುರಾಗದಂತೆ ಕ್ರಮವಹಿಸಬೇಕು. ಬೇಸಿಗೆ ಕಾರಣಕ್ಕೆ ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಮುಂಜಾಗ್ರತೆಯಾಗಿ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಅರಿತು ತಕ್ಕಂತೆ ಸಿದ್ದತೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಕೊಳವೆ ಬಾವಿಗಳು, ಕೆರೆಕಟ್ಟೆಗಳು ಬತ್ತಿಹೋಗಿವೆ. ಬೇಸಿಗೆ ಕಾರಣ ತೋರಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾದರೂ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಸೇರಿದಂತೆ ಬೇಸಿಗೆಯಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಕರ್ತವ್ಯ ನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಾ.ಪಂ.ಇಒ ವೀಣಾ, ಪಿಡಿಒಗಳು, ಸೆಸ್ಕ್ ಅಧಿಕಾರಿಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-40-1236591829

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.