ಪಾಂಡವಪುರ: ‘ಪ್ರತಿ ಹಳ್ಳಿಹಳ್ಳಿಗಳಲ್ಲೂ ರೈತ ಸಂಘವನ್ನು ಬಲಪಡಿಸುವುದರ ಜೊತೆಗೆ ರೈತರ ಜೀವನಮಟ್ಟದ ಸುಧಾರಣೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಸಂಘಟನೆ, ಹೋರಾಟದ ಜತೆಗೆ ರಚನಾತ್ಮಕ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

‘ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸಲಾಗುವುದು. ರೈತರ ಕೃಷಿ ಉತ್ಪನ್ನಗಳನ್ನು ಸಹಕಾರ ಸಂಘಗಳು ಕೊಂಡುಕೊಂಡು ಅವಶ್ಯಕತೆ ಇರುವ ಜನರಿಗೆ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಸಹಕಾರ ಸಂಘಗಳ ಕಾರ್ಯವೈಖರಿ ಬದಲಾವಣೆ ಮಾಡಬೇಕಿರುವುದರಿಂದ ಮೇಲುಕೋಟೆ ಕ್ಷೇತ್ರದ ಎಲ್ಲಾ ಸಹಕಾರ ಸಂಘಗಳ ಸಿಇಒ ಮತ್ತು ನಿರ್ದೇಶಕರಿಗೆ ಏ.1ರಂದು ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಮುಖಂಡರಾದ ಕೆನ್ನಾಳು ನಾಗರಾಜ್, ವಿಜಯಕುಮಾರ್, ಹರವು ಪ್ರಕಾಶ್, ಕಟ್ಟೇರಿ ಮಹದೇವಣ್ಣ, ರೂಪ ಅರಳಕುಪ್ಪೆ, ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಎಸ್.ದಯಾನಂದ ಹಾಜರಿದ್ದರು.

ಅಧ್ಯಕ್ಷರಾಗಿ ವೈ.ಪಿ.ಮಂಜುನಾಥ್ ಆಯ್ಕೆ

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಎಣ್ಣೆಹೊಳೆಕೊಪ್ಪಲು ಮಂಜುನಾಥ್ ಹಾಗೂ ಕಾರ್ಯದರ್ಶಿಯಾಗಿ ಡಾಮಡಹಳ್ಳಿ ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-40-707034527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.