ಪಾಂಡವಪುರ: ಗಾಂಧೀಜಿಯವರ ಸ್ವರಾಜ್ ಕಲ್ಪನೆ ಹಾಗೂ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಗಳನ್ನು ಪಂಚಾಯತ್ ರಾಜ್ ವ್ಯವಸ್ಥೆ ಸಾಕಾರಗೊಳಿಸುತ್ತಿದೆ ಎಂದು ಮೈಸೂರು ಅಬ್ದುಲ್ ನಜೀರ್ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ (ಎಸ್ಐಆರ್ಡಿ) ಸಂಪನ್ಮೂಲ ವ್ಯಕ್ತಿ ರಾಜಾ ಹುಣಸೂರು ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಪಂಚಾಯತ್ ರಾಜ್ ದಿವಸ ಆಚರಣೆ’ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎನ್.ಕೆಂಪೇಗೌಡ ಮಾತನಾಡಿ, ಸರ್ಕಾರದ ಸೌಲಭ್ಯಗಳು ಹಳ್ಳಿಯ ಜನರಿಗೆ ತಲುಪಲು ಪಂಚಾಯಿತಿಗಳು ಸೇತುವೆ ರೀತಿ ಕೆಲಸ ಮಾಡುತ್ತಿವೆ ಎಂದರು.

ತಾ.ಪಂ.ಇಒ ಎಂ.ಎಸ್.ವೀಣಾ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ದೇವೇಗೌಡ, ಉಪಾಧ್ಯಕ್ಷರಾದ ಮಂಜಮ್ಮ, ವಿನೋದ್, ಪ್ರಧಾನ ಕಾರ್ಯದರ್ಶಿ ಕೆ.ಮಂಜುನಾಥ್, ಖಜಾಂಚಿ ರಫೀಕ್, ಕ್ರೀಡಾ ಕಾರ್ಯದರ್ಶಿ ಹರೀಶ್, ಸಂಘಟನಾ ಕಾರ್ಯದರ್ಶಿ ಸೋಮಶೇಖರ್, ಪಾಂಡವಪುರ ತಾಲ್ಲೂಕು ಅಧ್ಯಕ್ಷ ಪಿ.ಸಿ.ಕುಮಾರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಡಿ.ಪಿ.ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-40-1474851383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.