ಪಾಂಡವಪುರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪಟ್ಟಣದ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಮುಂದಾಗಿರುವ ಕ್ರಮಕ್ಕೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರೋಧಿಸಿ ಪ್ರತಿಭಟನೆ ನಡೆಸಿರುವುದು ವಿಪರ್ಯಾಸದ ಸಂಗತಿ ಎಂದು ರೈತ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಎ.ಎಲ್.ಕೆಂಪೂಗೌಡ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ ಅವರು, ಪುರಸಭೆಯಲ್ಲಿ ಜೆಡಿಎಸ್ನ ಆಡಳಿತ ಮಂಡಳಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಆಶ್ರಯ ಸಮಿತಿ ಸಭೆಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ 176 ನಿವೇಶನ ಹಂಚಿಕೆ ಮಾಡಲು ನಿರ್ಣಯ ಮಾಡಲಾಗಿದೆ. ನಗರಾಭಿವೃದ್ದಿ ಇಲಾಖೆ ಕೂಡ

ಲಭ್ಯವಿರುವ ನಿವೇಶನಗಳನ್ನು ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳದಿರುವುದಕ್ಕೆ ಪುರಸಭೆ ಮುಖ್ಯಾಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-14-1629970287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.