ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ ಮಂಡ್ಯ ತಹಶೀಲ್ದಾರ್‌

Last Updated 5 ಆಗಸ್ಟ್ 2021, 22:14 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಿ ತಹಶೀಲ್ದಾರ್‌ ಚಂದ್ರಶೇಖರ ಶಂ ಗಾಳಿ ತಮ್ಮ ಪುತ್ರನ 1ನೇ ವರ್ಷದ ಜನ್ಮದಿನವನ್ನು ಶ್ರೀರಂಗಪಟ್ಟಣ ತಾಲ್ಲೂಕು, ಕೆಆರ್‌ಎಸ್‌ನ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ಅದ್ಧೂರಿಯಿಂದ ಆಚರಿಸಿದ್ದಾರೆ.

ಚಂದ್ರಶೇಖರ್‌ ಅವರ ಕುಟುಂಬ ಸದಸ್ಯರು, ಆಪ್ತರು ಸೇರಿ ಅದ್ಧೂರಿಯಿಂದ ಪಾರ್ಟಿ ಆಚರಿಸಿದ್ದಾರೆ. ಈ ವೇಳೆ ಯಾರೂ ಮಾಸ್ಕ್‌ ಧರಿಸಿರಲಿಲ್ಲ. ಕೋವಿಡ್‌ ಕಾರ್ಯಸೂಚಿಗಳನ್ನು ಪಾಲನೆ ಮಾಡಿರಲಿಲ್ಲ, ಪರಸ್ಪರ ಅಂತರ ಕಾಯ್ದುಕೊಂಡಿರಲಿಲ್ಲ.

ಕಾರ್ಯಕ್ರಮ ಆಯೋಜನೆ ಕುರಿತು ತಹಶೀಲ್ದಾರ್‌ ಚಂದ್ರಶೇಖರ್‌ ಪೊಲೀಸರಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಮಧ್ಯರಾತ್ರಿವರೆಗೂ ಪಾರ್ಟಿ ಮಾಡಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

‘ಜನರು ಮದುವೆ ಸೇರಿ ಯಾವುದೇ ಸಮಾರಂಭ ಮಾಡಿದರೂ ಅನುಮತಿ ಪಡೆಯುತ್ತಾರೆ, ನಿಯಮ ಪಾಲನೆ ಮಾಡುತ್ತಾರೆ. ನಿಯಮ ಪಾಲನೆಯ ಬಗ್ಗೆ ಪರಿಶೀಲನೆ ಮಾಡಿ ದಂಡ ಹಾಕುತ್ತಿದ್ದ ತಹಶೀಲ್ದಾರ್‌ ಚಂದ್ರಶೇಖರ್‌ ಶಂ ಗಾಳಿ ತಾವೇ ನಿಯಮ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಕುರಿತು ಕೆಆರ್‌ಎಸ್‌ ಪೊಲೀಸರು ಪ್ರಕರಣ ದಾಖಲು ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಶ್ರೀರಂಗಪಟ್ಟಣ ತಹಶೀಲ್ದಾರ್‌ಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT