ಮದ್ದೂರು: ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ದೇಶದಾದ್ಯಂತ ನಡೆಸುತ್ತಿರುವ ವೈದ್ಯರ ಮುಷ್ಕರದ ಭಾಗವಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯರು ಶನಿವಾರ ಒಪಿಡಿ ಸೇವೆ ಸ್ಥಗಿತಗೊಳಿಸಿ ಬೆಂಬಲ ಸೂಚಿಸಿದರು.
ಇದರಿಂದಾಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಿಂದ ಆಗಮಿಸುತ್ತಿದ್ದ ನೂರಾರು ಜನರು ಪರಿತಪಿಸುವಂತಾಯಿತು. ಒಪಿಸಿ ಸೇವೆ ಸ್ಥಗಿತವಾಗಿದ್ದರೂ ತುರ್ತು ಸೇವೆ ನೀಡಲಾಗುತ್ತಿತ್ತು. ವೈದ್ಯರು ಸೇವೆಗೆ ಹಾಜರಾಗಿರಲಿಲ್ಲ.