ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಜನಾಂದೋಲನ: ಶಾಸಕ ಕದಲೂರು ಉದಯ್

Published : 4 ಆಗಸ್ಟ್ 2024, 16:57 IST
Last Updated : 4 ಆಗಸ್ಟ್ 2024, 16:57 IST
ಫಾಲೋ ಮಾಡಿ
Comments

ಮದ್ದೂರು: ‘ಕೇಂದ್ರದ ಮಲತಾಯಿ ಧೋರಣೆ ಹಾಗೂ ಮುಖ್ಯಮಂತ್ರಿ ವಿರುದ್ಧದ ವಿರೋಧ ಪಕ್ಷದವರ ಆರೋಪ ಖಂಡಿಸಿ ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಆ.5ರಂದು ನಡೆಯುವ ಕಾರ್ಯಕ್ರಮದ ವೇದಿಕೆಯ ಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ನೆರೆಹಾವಳಿ, ಭೂಕುಸಿತ ಉಂಟಾಗಿರುವ ಈ ಪರಿಸ್ಥಿತಿಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಪಕ್ಷಗಳು  ರಾಜಕೀಯ ಲಾಭಕ್ಕಾಗಿ ಪಾದಯಾತ್ರೆಯನ್ನು ನಡೆಸುತ್ತಿರುವುದು ಎಷ್ಟು ಸರಿ’ ಎಂದು ಅವರು ಪ್ರಶ್ನಿಸಿದರು.

‘ಕೇಂದ್ರ ಸರ್ಕಾರ ಈಚೆಗೆ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ದೇಶದಲ್ಲಿಯೇ ಕರ್ನಾಟಕವು ಜಿಎಸ್‌ಟಿ ಸೇರಿ ತೆರಿಗೆ ಸಂದಾಯ ಮಾಡುವುದರಲ್ಲಿ 2ನೇ ಸ್ಥಾನದಲ್ಲಿದ್ದರೂ ಕಡೆಗಣಿಸಲಾಗಿದೆ’ ಎಂದರು.

‘ಸಿದ್ದರಾಮಯ್ಯ ಅವರ ಪತ್ನಿಗೆ ನ್ಯಾಯಬದ್ಧವಾಗಿ ಬದಲಿ ಕ್ರಮವಾಗಿ ಮುಡಾ ನಿವೇಶನ ನೀಡಲಾಗಿದೆ. ಆದ್ದರಿಂದ ಇದರಲ್ಲಿ ಯಾವುದೇ ಹಗರಣ ನಡೆದಿಲ್ಲವಾದರೂ ಕೇವಲ ಆರೋಪ ಮಾಡುವುದನ್ನೇ ಕೆಲಸ ಮಾಡಿಕೊಂಡಿವೆ’ ಎಂದರು.

ಆ.5ರಂದು ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ನಡೆಯುವ ಜನಾಂದೋಲನ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚಿನ ಜನರು ಬರಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ, ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು, ಶಾಸಕರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಮುಖಂಡರಾದ ಹರೀಶ್, ಗೊರವನಹಳ್ಳಿ ರಾಘವ್, ಡಾಬಾ ಮಹೇಶ್, ಮಹಾಲಿಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT