ಮಂಗಳವಾರ, ಮಾರ್ಚ್ 2, 2021
21 °C

ಕೇಂದ್ರದ ವಿರುದ್ಧ ಟೀಕೆ: ಸಾಹಿತಿ ಹಂ.ಪ.ನಾಗರಾಜಯ್ಯ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ್ದಾರೆ ಎಂಬ ಆರೋಪದ ಮೇಲೆ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ಗುರುವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದರು.

ಇದನ್ನೂ ಓದಿ:  ಏನು ಹೇಳಿದ್ದರು ಹಂ.ಪ.ನಾಗರಾಜಯ್ಯ?

ಜ.17ರಂದು ನಗರದಲ್ಲಿ ನಡೆದ ತಾಲ್ಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ, ಕೇಂದ್ರ ಸರ್ಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಹಂ.ಪ.ನಾ ಅವರನ್ನು ಠಾಣೆಗೆ ಕರೆಸಲಾಗಿತ್ತು.

‘ಆಕ್ಷೇಪಾರ್ಹ ಹೇಳಿಕೆಗಳ ಯಾವುದೇ ದಾಖಲೆಗಳನ್ನು ದೂರುದಾರರು ಒದಗಿಸಿಲ್ಲ. ನಾಗರಾಜಯ್ಯ ಅವರ ಹೇಳಿಕೆ ಪಡೆದು ಕಳುಹಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿಹಂ.ಪ.ನಾಗರಾಜಯ್ಯ ವಿಚಾರಣೆ: ಸಾಹಿತ್ಯ ವಲಯದಲ್ಲಿ ಖಂಡನೆ

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು