ಭಾನುವಾರ, ಮಾರ್ಚ್ 7, 2021
32 °C

ರಾಜೀನಾಮೆ ಸಲ್ಲಿಸಿದ ಕೆ.ಸಿ.ನಾರಾಯಣಗೌಡ ಮನೆಗೆ ಪೊಲೀಸ್ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಕೆ.ಆರ್‌.ಪೇಟೆ ಕ್ಷೇತ್ರದ ಜೆಡಿಎಸ್‌ ಶಾಸಕ ಕೆ.ಸಿ.ನಾರಾಯಣಗೌಡ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಜೆಡಿಎಸ್‌ ಕಾರ್ಯಕರ್ತರಗೆ ಆಘಾತ ತಂದಿದೆ. ರಾಜೀನಾಮೆ ಸುದ್ದಿ ಹರಡುತ್ತಿದ್ದಂತೆ ಪೊಲೀಸರು ಅವರ ಮನೆಗೆ ಭದ್ರತೆ ಒದಗಿಸಿದ್ದಾರೆ.

ನಾರಾಯಣಗೌಡರು ಶುಕ್ರವಾರ ಮುಂಬೈನಿಂದ ಕೆ.ಆರ್‌.ಪೇಟೆಗೆ ಬಂದಿದ್ದರು. ಹಲವು ಕಾರ್ಯಕರ್ತರು ಅವರನ್ನು ಭೇಟಿಮಾಡಿದ್ದರು. ‘ಜೆಡಿಎಸ್‌ ತನ್ನ ಮಾತೃಪಕ್ಷ, ವರಿಷ್ಠ ಎಚ್‌.ಡಿ.ದೇವೇಗೌಡರು ತಂದೆಯ ಸಮಾನ. ಯಾವುದೇ ಕಾರಣಕ್ಕೂ ಜೆಡಿಎಸ್‌ ತ್ಯಜಿಸುವುದಿಲ್ಲ. ಜೆಡಿಎಸ್‌ನಲ್ಲೇ ರಾಜಕಾರಣ ಆರಂಭಿಸಿದ್ದೇನೆ, ಇಲ್ಲೇ ಮುಗಿಸುತ್ತೇನೆ’ ಎಂದು ಶಾಸಕರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದ ಮಾತುಗಳನ್ನು ಕಾರ್ಯಕರ್ತರು ನೆನಪು ಮಾಡಿಕೊಂಡರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಅಮೆರಿಕದಲ್ಲಿ ಇರುವಾಗ ಈ ರೀತಿ ಮಾಡಬಾರದಿತ್ತು ಎಂಬ ಮಾತು ಕೂಡ ಕೇಳಿ ಬಂತು. ಮುಖಂಡರಲ್ಲಿ ಒಂದು ರೀತಿಯ ಹತಾಶೆಯ ಮನೋಭಾವ ಕಂಡು ಬಂತು. ಹಲವರು ಅವರ ಬಸವೇಶ್ವರನಗರದ ಮನೆಗೆ ಭೇಟಿ ನೀಡುತ್ತಿದ್ದರು. ಇದನ್ನು ಮನಗಂಡ ಪೊಲೀಸರು ಭದ್ರತೆ ಒದಗಿಸಿದರು.

‘ಶಾಸಕರು ಮೂರು ದಿನಗಳ ಮುಂಚೆಯೇ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಖಾಲಿ ಮಾಡಿದ್ದರು. ಸೋಫಾ ಸೆಟ್‌, ಕಚೇರಿಯ ವಸ್ತುಗಳನ್ನು ಲಾರಿಯೊಂದು ತುಂಬಿಕೊಂಡು ಹೋಗಿತ್ತು. ಆದರೆ ಇದು ರಾಜೀನಾಮೆಯ ಮುನ್ಸೂಚನೆ ಎಂಬುದು ಗೊತ್ತಿರಲಿಲ್ಲ’ ಎಂದು ಜೆಡಿಎಸ್‌ ಮುಖಂಡರೊಬ್ಬರು ತಿಳಿಸಿದರು.

* ಇವನ್ನೂ ಓದಿ...

ಕ್ಷಿಪ್ರ ಬೆಳವಣಿಗೆ| 12 ಶಾಸಕರಿಂದ ರಾಜೀನಾಮೆ ಸಲ್ಲಿಕೆ, ಶಾಸಕರಿಗೆ ಸಿಗದ ಸ್ಪೀಕರ್‌​

ವಿಶ್ವಾಸ ಗಳಿಸುವಲ್ಲಿ ಸಿಎಂ ವಿಫಲ, 14 ಶಾಸಕರು ರಾಜೀನಾಮೆ ನೀಡಿದ್ದೇವೆ: ವಿಶ್ವನಾಥ್

ಮತ್ತೆ 10 ಶಾಸಕರಿಂದ ರಾಜೀನಾಮೆ ಪರ್ವ?

* ರಾಜೀನಾಮೆ ಪತ್ರ ಪಡೆದು ಸ್ವೀಕೃತಿ ನೀಡಲು ಸಿಬ್ಬಂದಿಗೆ ತಿಳಿಸಿದ್ದೇನೆ: ಸ್ಪೀಕರ್‌

ಅತೃಪ್ತರ ಮನವೊಲಿಕೆಗೆ ಡಿಕೆಶಿ ಎಂಟ್ರಿಕೊಟ್ಟಿದ್ದಾರೆ, ಕಾದು ನೋಡೋಣ: ಸಿದ್ದರಾಮಯ್ಯ​

ರಾಜೀನಾಮೆ ಪರ್ವ | ರಾಜಭವನಕ್ಕೆ ತೆರಳಿದ 8 ಮಂದಿ ಶಾಸಕರು

ಸಿದ್ರಾಮು’ ಕಟ್ಟಿಹಾಕಲು ಗೌಡರ ‘ಪಟ್ಟು’

*  ಮದ್ದಿಲ್ಲದ ರೋಗ; ಮಧ್ಯಂತರ ರಾಗ​

ಈಗೇಕೆ ಸಿಡಿಯಿತು ದೇವೇಗೌಡರ ‘ಮಧ್ಯಂತರ ಚುನಾವಣೆ’ ಬಾಂಬ್

ಸಾಕಾಗಿದೆ, ಏನಾದರೂ ಮಾಡಿಕೊಳ್ಳಲಿ: ಸಿದ್ದರಾಮಯ್ಯ​

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು