ಶುಕ್ರವಾರ, ನವೆಂಬರ್ 15, 2019
23 °C

ಕಾಮಗಾರಿಗೆ ಭೂಮಿಪೂಜೆ

Published:
Updated:

ಕೆರಗೋಡು: ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿ ಮೊಡಚಾಕನಹಳ್ಳಿ ಗ್ರಾಮದಲ್ಲಿ ಗುರುವಾರ ಶಾಸಕ ಸಿ.ಎಸ್.ಪುಟ್ಟರಾಜು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಗಣೇಶ ದೇವಸ್ಥಾನದ ಸಭಾಭವನ, ರಸ್ತೆ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಗ್ರಾಮದ ಬೀದಿಗಳಲ್ಲಿ ಸಂಚರಿಸಿದ ಶಾಸಕರು ಅಭಿವೃದ್ಧಿ ಕಾಮಗಾರಿಗಳ ಕುರಿತು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.ಬಳಿಕ ಬಿಳಗೂಲಿ ಗ್ರಾಮಕ್ಕೆ ಭೇಟಿ ನೀಡಿ ನಡೆದಿರುವ ಅಭಿವೃದ್ಧಿ ಕಾಮಗಾರಿ ಕುರಿತು ಪರಿಶೀಲನೆ ನಡೆಸಿದರು.

 ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ಬಿ.ಬೆಟ್ಟಸ್ವಾಮಿ ಎಪಿಎಂಸಿ ಸದಸ್ಯ ಶಿವಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಮುಖಂಡ ಹೊಳಲು ಯೋಗೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)