ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಿ: ಶಾಸಕ ಉದಯ್

ಪೋಷಣ್ ಅಭಿಯಾನ ಮಾಸಾಚರಣೆಯಲ್ಲಿ ಶಾಸಕ ಉದಯ್‌ ಸಲಹೆ
Published 1 ಅಕ್ಟೋಬರ್ 2023, 14:33 IST
Last Updated 1 ಅಕ್ಟೋಬರ್ 2023, 14:33 IST
ಅಕ್ಷರ ಗಾತ್ರ

ಮದ್ದೂರು: ‘ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕವಾದ ಆಹಾರವನ್ನು ಸೇವಿಸಬೇಕು. ಆ ಮೂಲಕ ತಮ್ಮ ಹಾಗೂ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಶಾಸಕ ಉದಯ್ ತಿಳಿಸಿದರು.

ತಾಲೂಕಿನ ಹೆಮ್ಮನಹಳ್ಳಿಯಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಮಾಸಾಚರಣೆಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಮಕ್ಕಳು ಹಾಗೂ ತಾಯಿ ಅಪೌಷ್ಟಿಕತೆಯಿಂದ ಹಾಗೂ ಅನಾರೋಗ್ಯದಿಂದ ಬಳಲಾಬಾರದು ಎಂಬ ಉದ್ದೇಶದಿಂದ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

‘ಯಾವುದೇ ದೇಶ ಸಮಗ್ರ ರೀತಿಯಲ್ಲಿ ಅಭಿವೃದ್ಧಿಯಾಗಬೇಕಾದರೆ ಜನರು ಆರೋಗ್ಯವಂತರಾಗಿದ್ದಾಗ ಮಾತ್ರ ಸಾಧ್ಯ. ಆದ್ದರಿಂದ, ಪ್ರತಿಯೊಬ್ಬರೂ ಆರೋಗ್ಯವಂತರಾಗಿರಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡಿದರೆ ಅವರು ದೇಶದ ಆರೋಗ್ಯವಂತ ಪ್ರಜೆಗಳಾಗಲಿದ್ದಾರೆ’ ಎಂದು ತಿಳಿಸಿದರು.

‘ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸರ್ಕಾರದ ಗಮನಕ್ಕೆ ತರುತ್ತೇನೆ’ ಎಂದರು.

‘ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಅನೂಕೂಲವಾಗುವ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಿದೆ. ಇದರಿಂದ ಹೆಚ್ಚಿನ ಮಟ್ಟದಲ್ಲಿ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ’ ಎಂದರು.

ಈ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಈ ವೇಳೆ ಶಾಸಕ ಕೆ.ಎಂ. ಉದಯ್ ಅವರು ಗರ್ಭಿಣಿಯರಿಗೆ ವೈಯಕ್ತಿಕ ಧನ ಸಹಾಯ ಮಾಡಿದರು. ನಂತರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ತಿನಿಸಿದರು.

ಪ್ರಸ್ತುತ ಅಂಗೈಯಲ್ಲಿ ಆರೋಗ್ಯ ಮತ್ತು ಯೋಗ ಕುರಿತು ತಗ್ಗಹಳ್ಳಿ ಆಯುರ್ವೇದ ಆಸ್ಪತ್ರೆಯ ವೈದಾಧಿಕಾರಿ ಡಾ. ಭಾಗ್ಯಲಕ್ಷ್ಮಿ, ಪೌಷ್ಟಿಕ ಆಹಾರ ಮತ್ತು ಆರೋಗ್ಯ ಕುರಿತು ಮಿಮ್ಸ್ ಆಹಾರ ತಜ್ಞೆ ಎನ್. ಸುರಕ್ಷಾ ಉಪನ್ಯಾಸ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ. ನಾರಾಯಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಜಿಲ್ಲಾ ನಿರೂಪಣಾಧಿಕಾರಿ ಎಂ.ಆರ್. ಧರಣಿ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ, ಗ್ರಾ. ಪಂ ಮಾಜಿ ಅಧ್ಯಕ್ಷ, ಮುಖಂಡ ನಂದೀಶ್ ಗೌಡ, ಪಿಡಿಒ ಲೀಲಾವತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಬಿ.ಪಿ. ಭಾರ್ಗವಿ, ತಾಲ್ಲೂಕು ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿಚನ್ನರಾಜು, ನಂದೀಶ್ ಗೌಡ, ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT