ಮಂಡ್ಯ: ಮಳವಳ್ಳಿಯಲ್ಲಿ ಡಿ.16ರಂದು ಆರಂಭವಾಗಲಿರುವ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ.

ದ್ರೌಪದಿ ಮುರ್ಮು ಅವರು ಮಧ್ಯಾಹ್ನ 2.45ಕ್ಕೆ ಮಳವಳ್ಳಿ ಹೆಲಿಪ್ಯಾಡ್ನಲ್ಲಿ ಬಂದಿಳಿದು, ಮಧ್ಯಾಹ್ನ 3.15ಕ್ಕೆ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಜೆ 4.35ಕ್ಕೆ ಅವರನ್ನು ಹೆಲಿಪ್ಯಾಡ್ನಲ್ಲಿ ಬೀಳ್ಕೊಡಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ.

ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಡಿ.16ರಿಂದ ಡಿ.22ರವರೆಗೆ ಉಪನ್ಯಾಸ, ವಸ್ತುಪ್ರದರ್ಶನ, ಸಂಗೀತ, ನಾಟಕ, ಹಾಸ್ಯ ಕಾರಂಜಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮ ಹಾಗೂ ಡಿ.21ರಂದು ಉತ್ಸವಮೂರ್ತಿಯ ಬೆಳ್ಳಿಪಲ್ಲಕ್ಕಿ ಮೆರವಣಿಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.