ಮಳವಳ್ಳಿ: ಶಿವರಾತ್ರೀಶ್ವರ ಶಿವಯೋಗಿಯವರ 1066ನೇ ಜಯಂತ್ಯುತ್ಸವ ಹಾಗೂ ಇದೇ ಮೊದಲ ಬಾರಿಗೆ ಮಳವಳ್ಳಿ ತಾಲ್ಲೂಕಿಗೆ ಡಿ.16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಶಾಂತಿ ಕಾಲೇಜಿನ ಮುಂಭಾಗದ 33 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ಸೇರಿದಂತೆ ಪಟ್ಟಣವನ್ನು ಶೃಂಗರಿಸಲಾಗುತ್ತಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.16ರಂದು ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಯವರ ಜಯಂತ್ಯುತ್ಸವದಲ್ಲಿ ಭಾಗಿಯಾಗಿ 7 ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

16ರಂದು ಮಧ್ಯಾಹ್ನ 2.10ಕ್ಕೆ ಮೈಸೂರಿನ ಏರ್ಪೋರ್ಟ್ಗೆ ಆಗಮಿಸಲಿರುವ ದ್ರೌಪದಿ ಮುರ್ಮು ಅವರು ಬಳಿಕ ಹೆಲಿಕಾಪ್ಟರ್ನಲ್ಲಿ ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ಲೋಕೋಪಯೋಗಿ ಇಲಾಖೆ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಇಳಿದು ಸುಮಾರು 4 ಕಿ.ಮೀ ದೂರ ವಿಶೇಷ ಭದ್ರತಾ ವ್ಯವಸ್ಥೆಯೊಂದಿಗೆ ಕಾರಿನಲ್ಲಿ ರಸ್ತೆ ಮಾರ್ಗದ ಮೂಲಕ ವೇದಿಕೆಗೆ ಆಗಮಿಸಲಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ-209ರ ಸಂಚಾರವನ್ನು ಕೆಲ ಕಾಲ ನಿರ್ಬಂಧಗೊಳಿಲಾಗುತ್ತಿದೆ. ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ರಾಷ್ಟ್ರಪತಿ ಅವರು ತೆರಳಲಿದ್ದಾರೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣದಲ್ಲಿ ಈಗಾಗಲೇ ಭದ್ರತಾ ತಂಡ ಕಾರ್ಯನಿರ್ವಹಿಸುತ್ತಿದೆ. ದೆಹಲಿಯ ಎಸ್ಜಿಪಿ ತಂಡದ ಮುಖ್ಯಸ್ಥರು ಶನಿವಾರ ಮಳವಳ್ಳಿ ಪಟ್ಟಣಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಅವರ ಆಗಮನ ಹಾಗೂ ನಿರ್ಗಮನದ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಹ ಕಟ್ಟೆಚ್ಚರ ವಹಿಸಿದೆ. ಭದ್ರತೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಕಳೆದ ಹತ್ತು ದಿನಗಳಿಂದ ಜಿಲ್ಲಾಧಿಕಾರಿ ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರತಿದಿನವೂ ಮಳವಳ್ಳಿ ಪಟ್ಟಣಕ್ಕೆ ಭೇಟಿ ನೀಡಿ ಸಿದ್ದತಾ ಕಾರ್ಯ ಹಾಗೂ ಭದ್ರತಾ ವ್ಯವಸ್ಥೆ ಪರಿಶೀಲಿಸುತ್ತಿದ್ದಾರೆ. ಮೈಸೂರು ದಕ್ಷಿಣ ವಲಯದ ಡಿಐಜಿಪಿ ಬೋರಲಿಂಗಯ್ಯ ಸಹ ಕೆಲ ದಿನಗಳ ಹಿಂದೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

16ರಂದು ಮಧ್ಯಾಹ್ನ 3.15ಕ್ಕೆ ಜಯಂತ್ಯುತ್ಸವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಉದ್ಘಾಟಿಸುವವರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಾನ್ನಿಧ್ಯ ಹಾಗೂ ಕನಕಪುರ ದೇಗುಲಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ ಅವರ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ವಹಿಸುವರು. ಸ್ಮರಣ ಸಂಚಿಕೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಭಾಗವಹಿಸುವರು.

ಸಾವಿರಕ್ಕೂ ಪೊಲೀಸರ ನಿಯೋಜನೆ

ರಾಷ್ಟ್ರಪತಿ ಅವರ ಭೇಟಿ ಹಿನ್ನೆಲೆಯಲ್ಲಿ ಮಳವಳ್ಳಿ ಎಲ್ಲೆಡೆ ಭದ್ರತೆಕ್ಕಾಗಿ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರು ಮತ್ತು ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ 4 ಎಎಸ್ ಪಿ 9 ಡಿವೈಎಸ್ ಪಿ 35 ಸಿಪಿಐ 60 ಪಿಎಸ್ಐ 125 ಎಎಸ್ಐ 6 ಕೆಎಸ್ಆರ್ಪಿ 8 ಡಿಎಆರ್ 3 ಕ್ಯೂಆರ್ಟಿ ತುಕಡಿ ಹಾಗೂ 1000 ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜನೆಗೊಳಿಸಲಾಗಿದೆ. ಅಲ್ಲದೇ ಮೂರು ಡ್ರೋನ್ ಮೂಲಕ ಹದ್ದಿನ ಕಣ್ಣು ಇಡಲಾಗಿದೆ. ರಾಷ್ಟ್ರಪತಿ ಆಗಮನದಿಂದ ನಿರ್ಗಮಿಸುವವರೆಗೂ ವಿವಿಧ ಇಲಾಖೆಯ ಹಲವು ಅಧಿಕಾರಿಗಳಿಗೆ ಕೆಲ ಜವಾಬ್ದಾರಿಯನ್ನು ವಹಿಸಲಾಗಿದೆ.

ಪಟ್ಟಣದಲ್ಲಿ ವಿದ್ಯುತ್ ದೀಪಾಂಲಕಾರ

ತಾಲ್ಲೂಕಿಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹೆಚ್ಚಿನ ಜಾಗೃತಿ ವಹಿಸಲಾಗುತ್ತಿದೆ. ಮಾರೇಹಳ್ಳಿ ಮಾರ್ಗವಾಗಿ ಕೊಳ್ಳೇಗಾಲ ರಸ್ತೆ ಮೈಸೂರು ರಸ್ತೆಯ ಮೂಲಕ ವೇದಿಕೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೆರಳುವ ಸಂದರ್ಭದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸುತ್ತಿದ್ದಾರೆ. ರಸ್ತೆ ವಿಭಜಕಗಳಿಗೆ ಸಣ್ಣಬಣ್ಣ ಬಳಿಯುವ ಕಾರ್ಯ ನಡೆಯುತ್ತಿದೆ. ಒಂದು ವಾರಗಳ ಕಾಲ ಜಯಂತ್ಯುತ್ಸವ ನಡೆಯುವುದರಿಂದ ಪಟ್ಟಣದ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಂಲಕಾರ ಮಾಡಲಾಗುತ್ತಿದೆ. ಗೊಂದಲವಾಗುವ ಸಾಧ್ಯತೆ ಇರುವುದರಿಂದ ಬ್ಯಾನರ್ಗಳನ್ನು ನಿಷೇಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.