ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | ಪ್ರಜ್ವಲ್‌ ವಿಚಾರದಲ್ಲಿ ಪ್ರಧಾನಿ ಮೌನ: ಪ್ರತಿಭಟನೆ

Published 6 ಮೇ 2024, 14:49 IST
Last Updated 6 ಮೇ 2024, 14:49 IST
ಅಕ್ಷರ ಗಾತ್ರ

ಮಂಡ್ಯ: ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ.ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ದೇಶದ ಬಹುದೊಡ್ಡ ಲೈಂಗಿಕ ಹಗರಣದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮೌನಿಯಾಗಿರುವ ಬಿಜೆಪಿ ಪಕ್ಷದ ನಾಯಕರ ನಡೆ ಸರಿಯಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪರಮಾಪ್ತ ಪಕ್ಷವಾಗಿರುವ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿದರು.

ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ ಆ ನೀಚ ಕೃತ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿರುವ ಪ್ರಜ್ವಲ್‌ ನಡೆ ಖಂಡನೀಯ. ಈ ಬಗ್ಗೆ ನೊಂದ ಮಹಿಳೆಯರು ದೂರು ನೀಡಿದ್ದು ಭಾರತ ದೇಶದಲ್ಲಿ ನಡೆದಿರುವ ಅತಿ ದೊಡ್ಡ ಲೈಂಗಿಕ ಹಗರಣ ಇದಾಗಿದೆ. ಎಚ್.ಡಿ.ರೇವಣ್ಣ ಅವರು ಈಗಾಗಲೇ ಬಂಧನವಾಗಿದ್ದಾರೆ. ಇಷ್ಟೆಲ್ಲ ರಾದ್ಧಾಂತ ನಡೆಯುತ್ತಿದ್ದರೂ ಬಿಜೆಪಿ ಪಕ್ಷದ ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ನಾಯಕರು ಮಾತ್ರ ಮೌನಕ್ಕೆ ಶರಣಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಮು ದ್ವೇಷ ಹರಡುವ ಉದ್ದೇಶದಿಂದ ಹುಬ್ಬಳ್ಳಿಯ ನೇಹಾ ಪ್ರೇಮ ವೈಪಲ್ಯ ಕೊಲೆ ಪ್ರಕರಣವನ್ನು ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸಕ್ಕೆ ಮುಂದಾದವರು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತು ಒಂದೇ ಒಂದು ಹೋರಾಟ ಮಾಡುತ್ತಿಲ್ಲ ಏಕೆ? ಹಗರಣದಲ್ಲಿ ಪ್ರಕರಣದಲ್ಲಿ ನೊಂದಿರುವ ಸಾವಿರಾರು ಮಹಿಳೆಯರು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದರು.

ಇಂತಹ ನೀಚ ಮನಸ್ಥಿತಿಯ ವ್ಯಕ್ತಿ ರಾಜಕಾರಣದಲ್ಲಿ ಮಾತ್ರವಲ್ಲ, ಸಮಾಜದಲ್ಲಿ ಇರಲು ಸಹ ನಾಲಾಯಕ್ ಆಗಿದ್ದು, ಇಂತಹ ವ್ಯಕ್ತಿಯನ್ನು ದೇಶ ತೊರೆಯಲು ಸಹಕರಿಸಿದವರು ಯಾರು ಎಂಬ ಬಗ್ಗೆ ತನಿಖೆಯಾಗಬೇಕು? ಪ್ರಜ್ವಲ್ ಹಾಗೂ ಎಚ್.ಡಿ.ರೇವಣ್ಣ ಪ್ರಭಾವಿಗಳಾಗಿರುವುದರಿಂದ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ರಾಜಕೀಯ ಪ್ರಾಬಲ್ಯ ಬಳಸಿಕೊಂಡು ಸಾಕ್ಷಿಗಳ ಮೇಲೆ ಒತ್ತಡ ಹೇರುವ ಮೂಲಕ ಪ್ರಕರಣ ಮುಚ್ಚಿಹಾಕುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆಳುವ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಪಿಐ ಮುಖಂಡರಾದ ಸಾದತ್ ಆಲಿ, ಮುಕ್ತಾರ್ ಅಹಮದ್, ಮೊಹರ್, ನೂರುಲ್ಲಾ ಶರೀಫ್, ಸಿದ್ದರಾಜು, ನಿಖಿದ್ ಬಾನು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT