ಮಳವಳ್ಳಿ: ಈ ಬಾರಿಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಅಧಿಕಾರಿಗಳು ತಯಾರಿ ಮಾಡಿಕೊಳ್ಳಬೇಕು ಎಂದು ಶಾಸಕ ಡಾ.ಕೆ.ಅನ್ನದಾನಿ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಜನಸಾಮಾನ್ಯರ ಜತೆಗೆ ಅಧಿಕಾರಿಗಳ ಮೇಲೂ ಇರುತ್ತದೆ. ಕನ್ನಡ ನೆಲ, ಜಲ, ಭಾಷೆ ಸದೃಢಗೊಳಿಸಲು ಎಲ್ಲರೂ ಮುಂದಾಗಬೇಕು. ತಹಶೀಲ್ದಾರ್ ಮತ್ತು ತಾ.ಪಂ.ಇಒ ಅವರು ಸೂಚಿಸುವ ಕೆಲಸವನ್ನು ಪಾಲಿಸಬೇಕು. ಸಾಹಿತ್ಯ ಸಮ್ಮೇಳನದ ಆಚರಣೆಯ ಸಭೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಅಂಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಚಿಂತನೆ ನಡೆಸಬೇಕಾಗುತ್ತದೆ ಎಂದರು.

ತಾಲ್ಲೂಕು ಸಾಹಿತ್ಯ ಸಮ್ಮೇಳನವು ಮಾರ್ಚ್ ಮೊದಲ ವಾರದಲ್ಲಿ ಆಯೋಜನೆ ಮಾಡಲಾಗುವುದು ಎಂದರು.

ಪ್ರಭಾರ ತಹಶೀಲ್ದಾರ್ ಬಿ.ವಿ.ಕುಮಾರ್ ಮಾತನಾಡಿ, ಕನ್ನಡ ಸಾಹಿತ್ಯದಂತಹ ಕಾರ್ಯ ಚಟುವಟಿಕೆಗಳಲ್ಲಿ ಎಲ್ಲರೂ ಭಾಗವಹಿಸಬೇಕು. ಇಲಾಖೆಗಳ ಸಿಬ್ಬಂದಿಯೂ ಸಹಕಾರ ನೀಡಬೇಕು ಎಂದು ಹೇಳಿದರು.

ತಾ.ಪಂ.ಇಒ ರಾಮಲಿಂಗಯ್ಯ, ಪುರಸಭೆ ಮುಖ್ಯಾಧಿಕಾರಿ ಪಿ.ಹರಿಪ್ರಸಾದ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಚೇತನ್ ಕುಮಾರ್, ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೇಗೌಡ, ಸರ್ಕಾರಿ ನೌಕರರ ಸಂಘದ ಎಚ್.ಮಲ್ಲಿಕಾರ್ಜುನಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.