ಬುಧವಾರ, ನವೆಂಬರ್ 13, 2019
28 °C

ವೇಶ್ಯಾವಾಟಿಕೆ: 8 ಜನರ ಬಂಧನ

Published:
Updated:

ಶ್ರೀರಂಗಪಟ್ಟಣ: ತಾಲ್ಲೂಕಿನ ನಗುವನಹಳ್ಳಿ ಗೇಟ್‌ ಬಳಿ, ಬ್ರಹ್ಮಪುರದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ಬುಧವಾರ ರಾತ್ರಿ 8 ಮಂದಿಯನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೈಸೂರಿನ ಮಹೇಶ್‌, ಕಿರಣ್‌, ಎಸ್ಕೇಪ್‌ ಬಾಬು ಹಾಗೂ ಗ್ರಾಹಕರಾಗಿ ಬಂದಿದ್ದ ಕೆ.ಆರ್‌. ಪೇಟೆ ಮೂಲದ ಐವರನ್ನು ಬಂಧಿಸಲಾಗಿದೆ. ಹೊರ ರಾಜ್ಯದ ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ದಂಧೆಗೆ ಬಳಸುತ್ತಿದ್ದ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಲಾರೆನ್ಸ್‌ ಎಂಬವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ನಡೆಸುತ್ತಿದ್ದ ವೇಶ್ಯಾವಾಟಿಕೆ ಜಾಲದ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮತ್ತು ಪರಶು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿಗಳು ತಪ್ಪಿಸಿಕೊಳ್ಳಲು ಈ ಮನೆಯಲ್ಲಿ ಗುಪ್ತ ಮಾರ್ಗವನ್ನು ನಿರ್ಮಿಸಲಾಗಿತ್ತು ಎಂದು ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)