ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್.ಐ.ಹೊನ್ನಲಗೆರೆ ಗ್ರಾಮದಲ್ಲಿ ಚುನಾವಣಾಧಿಕಾರಿ ವಿರುದ್ದ ಪ್ರತಿಭಟನೆ

Published 9 ಫೆಬ್ರುವರಿ 2024, 15:31 IST
Last Updated 9 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ

ಭಾರತೀನಗರ: ಸಮೀಪದ ಎಸ್.ಐ.ಹೊನ್ನಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣಾ ಕರ್ತವ್ಯ ನಿರ್ವಹಿಸಬೇಕಿದ್ದ ಚುನಾವಣಾಧಿಕಾರಿ ತಡವಾಗಿ ಬಂದ ಹಿನ್ನೆಲೆಯಲ್ಲಿ ಗ್ರಾಮದ ಮುಖಂಡರು ಮತ್ತು ನಿರ್ದೇಶಕರು ಸಂಘದ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.

ಫೆ.7 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಅಧ್ಯಕ್ಷ-ಉಪಾಧ್ಯಕ್ಷರ ನಾಮಪತ್ರ ಸಲ್ಲಿಕೆಗೆ ಸಮಯ ನಿಗಧಿಪಡಿಸಲಾಗಿತ್ತು. ಆ ವೇಳೆಗೆ ನಾಮಪತ್ರ ಸಲ್ಲಕೆ ಕಾರ್ಯ ಪೂರ್ಣಗೊಳ್ಳಬೇಕಿತ್ತು. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ವೆಂಕಟೇಶ್‌ಮೂರ್ತಿ 11.32 ಕ್ಕೆ ಕಚೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಯಿತು.

ಚುನಾವಣಾಧಿಕಾರಿ ವೆಂಕಟೇಶ್‌ಮೂರ್ತಿ ಅವರ ವಿರುದ್ಧ ಉನ್ನತಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಕರು, ಗ್ರಾಮದ ಮುಖಂಡರು ಆಗ್ರಹಿಸಿ ಸಂಘದ ಕಚೇರಿಗೆ ಬೀಗ ಜಡಿದು ಚುನಾವಣೆ ಮುಂದೂಡುವಂತೆ ಆಗ್ರಹಿಸಿದರು.

ಸಂಘದ ನಿರ್ದೇಶಕರಾದ ಕೆಂಪೇಗೌಡ, ವೆಂಕಟೇಶ್, ತಾಯಮ್ಮ, ಚಿಕ್ಕಸ್ವಾಮಿ, ಕೆಂಪರಾಜು, ಮುಖಂಡರಾದ ಮಾದೇಗೌಡ, ಪುನೀತ್‌ಕುಮಾರ್, ರಾಜು, ರವಿ, ಶಿವಣ್ಣ, ಅರುಣ, ಪುಟ್ಟಸ್ವಾಮಿ, ದೇವರಾಜು, ರೇವಣ್ಣಸ್ವಾಮಿ, ಅಶೋಕ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT