ಮದ್ದೂರು: ಒಕ್ಕಲಿಗ ಸಮಾಜದ ಗುರುಗಳಾದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಹಾಗೂ ಚುಂಚಶ್ರೀ ಗೆಳೆಯರ ಬಳಗ ವತಿಯಿಂದ ಪಟ್ಟಣದ ಐ.ಬಿ ವೃತ್ತದ ಬಳಿ ಶನಿವಾರ ಬೆಂಗಳೂರು– ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಒಕ್ಕಲಿಗರ ಸಂಘದ ಅಧ್ಯಕ್ಷ ದೇಶಹಳ್ಳಿ ಪಿ.ಶಿವಪ್ಪ ಮಾತನಾಡಿ, ‘ಚಂದ್ರಶೇಖರನಾಥ ಸ್ವಾಮೀಜಿ ಕಾರ್ಯಕ್ರಮವೊಂದರಲ್ಲಿ ಬಾಯ್ತಪ್ಪಿನಿಂದ ಮುಸ್ಲಿಮರಿಗೆ ಮತದಾನ ಹಕ್ಕು ನಿಷೇಧ ಮಾಡುವಂತೆ ತಿಳಿಸಿದ ನಂತರ ಈ ಸಂಬಂಧ ಕ್ಷಮೆ ಕೇಳಿದ್ದರೂ, ಮುಸ್ಲಿಂ ವ್ಯಕ್ತಿಯೊಬ್ಬರು ಇವರ ವಿರುದ್ಧ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಿಸಿಕೊಂಡಿರುವ ಕ್ರಮ ಸರಿಯಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಸ್ವಾಮೀಜಿರಿಗೆ ನೋಟಿಸ್ ಜಾರಿ ಮಾಡಿ ಪೊಲೀಸ್ ಠಾಣೆಗೆ ಬರುವಂತೆ ತಿಳಿಸಿರುವುದು ಖಂಡನಾರ್ಹ. ಈ ಕೂಡಲೇ ಈ ಸಂಬಂಧ ದಾಖಲಾಗಿರುವ ಪ್ರಕರಣವನ್ನು ವಾಪಸ್ ಪಡೆದುಕೊಳ್ಳಬೇಕು ಹಾಗೂ ಸ್ವಾಮೀಜಿ ಅವರನ್ನು ಗೌರವದಿಂದ ನಡೆಸಿಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಕೃಷ್ಣ, ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಕಾರ್ಯದರ್ಶಿ ಸುರೇಶ್, ಪದಾಧಿಕಾರಿಗಳಾದ ಶಂಕರಯ್ಯ, ಚನ್ನಸಂದ್ರ ರವಿ, ದೊರೆಸ್ವಾಮಿ, ಮಿಲ್ಟ್ರಿ ಕುಮಾರ್, ರವಿ, ರಾಜೇಶ್, ಸಿದ್ದೇಗೌಡ, ಶಿವಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.