ಮಂಡ್ಯ: ಕನ್ನಡ ಭಾಷೆಗೆ ಅವಮಾನ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ಕ್ಷಮೆ ಕೇಳುವುದು ಹಾಗೂ ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿಯನ್ನಾಗಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಕದಂಬ ಸೈನ್ಯ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡ ಕಾರ್ಯಕರ್ತರು ಕಮಲ್ ಹಾಸನ್ ಕ್ಷಮೆ ಕೇಳುವಂತೆ ಮತ್ತು ರಾಜ್ಯ ಸರ್ಕಾರ ಕನ್ನಡ ನಟಿಯನ್ನೇ ರಾಯಭಾರಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.

‘ಪಾರಂಪರಿಕ ಮೈಸೂರ್ ಸ್ಯಾಂಡಲ್ ಸೋಪ್ ಉತ್ಪನ್ನಗಳಿಗೆ ಪರಭಾಷೆ ನಟಿ ತಮನ್ನಾ ಭಾಟಿಯಾಗೆ ₹6.20 ಕೋಟಿ ನೀಡಿ ರಾಯಭಾರಿಯಾಗಿ ನೇಮಕ ಮಾಡುವುದಾದರೂ ಏನಿತ್ತು, ಇದರ ಬದಲು ಕನ್ನಡ ನಟಿಯರಿಗೆ ಅವಕಾಶ ನೀಡಬಹುದಿತ್ತಲ್ಲವೇ ಹಾಗಾಗಿ ಇವರ ಹೆಸರನ್ನು ತಕ್ಷಣ ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಕನ್ನಡ ಭಾಷೆ, ಸಂಸ್ಕೃತಿಯ ಅಸ್ಮಿತೆ ಉಳಿಸಲು ಸ್ವಾಭಿಮಾನಿ ಕನ್ನಡಿಗರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ, ದ್ರಾವಿಡ ಭಾಷೆಗಳಲ್ಲಿ ಅತಿ ಹೆಚ್ಚು ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ನಮ್ಮ ಕನ್ನಡ ಮತ್ತು ಕನ್ನಡಿಗರು ಎಂಬುದು ಜಗಜ್ಜಾಹಿರವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕರ್ನಾಟಕಕ್ಕೆ ಬರುತ್ತಿರುವ ವಲಸಿಗರಿಗೆ ಯಾವುದೇ ನೀತಿ ನಿಯಮಗಳು ಕಾನೂನು ಮಿತಿ ಇಲ್ಲ, ಭಾರತದಲ್ಲಿ ಅತಿ ಹೆಚ್ಚು ವಲಸಿಗರಿಂದ ತುಂಬಿರುವ ರಾಜ್ಯ ಕರ್ನಾಟಕವಾಗಿದೆ. ಪ್ರತಿನಿತ್ಯ ಕನ್ನಡ ಭಾಷೆ, ಕನ್ನಡಿಗರ ಮೇಲೆ ನಿರಂತರವಾಗಿ ದೌರ್ಜನ್ಯ ಪುಂಡಾಟಿಕೆ ನಡೆಸುತ್ತಿರುವುದು ದುರಂತ. ಎಲ್ಲಾ ರಂಗಗಳಲ್ಲೂ ಕೂಡ ವಲಸಿಗರ ಅತಿಕ್ರಮ ಪ್ರವೇಶ ದೌರ್ಜನ್ಯ ಪುಂಡಾಟಿಕೆ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ’ ಎಂದು ಕಿಡಿಕಾರಿದರು.

‘ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ಮಾತನ್ನು ಹೇಳಿರುವ ಕಮಲ್ ಹಾಸನ್ ಅವರ ಎಲ್ಲ ಚಲನಚಿತ್ರಗಳನ್ನು ಬಹಿಷ್ಕರಿಸಿ ಆ ಮೂಲಕ ಪರಭಾಷೆ ನಟನಿಗೆ ರಾಜ್ಯ ಸರ್ಕಾರ ತಕ್ಕ ಉತ್ತರ ನೀಡಬೇಕು. ಈ ರೀತಿ ಮಾಡಿದರೆ ಕನ್ನಡದ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ’ ಎಂದು ಒತ್ತಾಯಿಸಿದರು.

‘ಈ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ಬೆಂಗಳೂರು ಕೇಂದ್ರ ಆಡಳಿತ ಮಾಡಬೇಕು ಎಂದು ಹೇಳಿಕೆ ನೀಡಿದಾಗ ಕನ್ನಡ ಪದ್ಮಭೂಷಣ ರಾಜಕುಮಾರ ತ್ರೀವವಾಗಿ ವಿರೋಧಿಸಿದಾಗ, ತಮಿಳುನಾಡಿನ ಬಹಿರಂಗ ಸಭೆಯಲ್ಲಿ ರಾಜಕುಮಾರ ಅವರ ಮುಂದೆ ಕ್ಷಮೆ ಕೇಳಿದ್ದರು. ಕನ್ನಡಕ್ಕೆ ದೊಡ್ಡ ಶಕ್ತಿಯಾಗಿದ್ದವರು ನಮ್ಮ ರಾಜಕುಮಾರ ಅವರು, ಆದರೆ ಇವರ ಮಗ ನಟ ಶಿವರಾಜ್ಕುಮಾರ್ ಅವರ ಎದುರೇ ಕನ್ನಡ ಭಾಷೆ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿದಾಗ ಖಂಡಿಸಿದೆ ಮೌನ ವಹಿಸಿರುವುದು ಏಕೆ’ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಕದಂಬಸೈನ್ಯ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್, ಭಾರತೀಯ ಕಿಸಾನ್ ಸಂಘ ಜಿಲ್ಲಾ ಪ್ರಮುಖ್ ಶಿವಣ್ಣ ಹೊಳಲು, ಮುಖಂಡರಾದ ಉಮೇಶ್ ರಾಂಪುರ, ಜೋಸೆಫ್, ರಾಮು ಕೀಲಾರ, ಉಮ್ಮಡಹಳ್ಳಿ ನಾಗೇಶ್, ಅಕ್ರಂ ಪಾಷಾ, ಸಲ್ಮಾನ್, ಆರಾಧ್ಯ ಗುಡಿಗೇನಹಳ್ಳಿ, ಎಲ್.ಜಯರಾಮ, ಮೋಹನ್ ಚಿಕ್ಕಮಂಡ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.