ಹಲಗೂರು: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಕೆಲಸ ಮಾಡಿದ ಕೂಲಿಕಾರರಿಗೆ ಕಡಿಮೆ ಹಣ ಪಾವತಿ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ ಮಾತನಾಡಿ, ಉದ್ಯೋಗ ಖಾತರಿ ಕಾರ್ಯಕ್ರಮ ಬಡಜನರ ಸಂಜೀವಿನಿ ಆಗಿದ್ದು, ಆರಂಭದ ದಿನಗಳಿಂದಲೂ ಕಡಿಮೆ ಕೂಲಿ ಪಾವತಿಸುವುದು, ಎನ್.ಎಂ.ಆರ್. ಶೂನ್ಯ ಮಾಡುವುದು ಹಲವಾರು ತೊಂದರೆಗಳನ್ನು ಎದುರಿಸಬೇಕಾಗಿದೆ. ಗ್ರಾಮೀಣ ಪ್ರದೇಶದ ಜನರು ಬಡತನದಲ್ಲಿಯೇ ಸಾಗಬೇಕಾದ ಪರಿಸ್ಥಿತಿ ಇದೆ. ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ವಿಫಲರಾಗಿದ್ದು, ಬಡಜನರು ಜೀವನ ನಿರ್ವಹಣೆ ಮಾಡಲು ಪರಿತಪಿಸುವಂತಾಗಿದೆ’ ಎಂದು ನೋವು ತೋಡಿಕೊಂಡರು.

ಹಲಗೂರು ವ್ಯಾಪ್ತಿಯಲ್ಲಿ ಬರಗಾಲದಿಂದ ತತ್ತರಿಸಿರುವ ನೂರಾರು ಕುಟುಂಬಗಳಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಕೆಲಸ ಆಸರೆಯಾಗಿದೆ. ಆದರೆ ನರೇಗಾ ಎಂಜಿನಿಯರ್ ಅರುಣ್ ಕುಮಾರ್ ಮತ್ತು ಅಧಿಕಾರಿಗಳು ಸಬೂಬು ಹೇಳಿ ದಿನಕ್ಕೆ ₹260 ಮಾತ್ರ ಕೂಲಿ ಪಾವತಿಸಿರುವುದು ಖಂಡನೀಯ. ಕೂಡಲೇ ಎಲ್ಲಾ ಕೂಲಿಕಾರರಿಗೂ ಸರ್ಕಾರದ ನಿಯಮದಂತೆ ₹349 ಕೂಲಿ ಪಾವತಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ಪ್ರಧಾನ ಕಾರ್ಯದರ್ಶಿ ಹನುಮೇಶ್, ಹಲಗೂರು ಹೋಬಳಿ ಘಟಕದ ಅಧ್ಯಕ್ಷೆ ಕುಂತೂರು ಲಕ್ಷ್ಮಿ, ಕಾರ್ಯದರ್ಶಿ ಗೊಲ್ಲರಹಳ್ಳಿ ಲಕ್ಷ್ಮಿ, ಮುಖಂಡರಾದ ರಾಮಣ್ಣ, ಕಾಯಕ ಬಂಧು ತೊಳಸಮ್ಮ, ರಾಜಮ್ಮ, ಮಹದೇವಮ್ಮ, ಮಂಜುಳ, ಗೋಪಿ, ಶಿವಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.