ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಲ್ಲಿ ಆತಂಕ ಸೃಷ್ಟಿ ಮಾಡುತ್ತಿರುವ ಆರೋಪ: ಸಂಸದೆ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 9 ಜುಲೈ 2021, 2:35 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಸಂಸದೆ ಎ.ಸುಮಲತಾ ಅವರು ಕೆಆರ್‌ಎಸ್‌ ಜಲಾಶಯ ಬಿರುಕು ಬಿಟ್ಟಿದೆ ಎಂದು ಸುಳ್ಳು ಹೇಳಿಕೆ ನೀಡಿ ಜನರಲ್ಲಿ ಆತಂಕ ಉಂಟು ಮಾಡಿದ್ದು, ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಮುಖ್ಯ ದ್ವಾರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಕೆಆರ್‌ಎಸ್‌ ಗ್ರಾ.ಪಂ. ಅಧ್ಯಕ್ಷ ನಾಗೇಂದ್ರಕುಮಾರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸುಮಲತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಲ ಸಂಪನ್ಮೂಲ ಖಾತೆ ಮಾಜಿ ಸಚಿವ ಸಚಿವ ಡಿ.ಕೆ.ಶಿವಕುಮಾರ್‌, ಮೈಸೂರು ಸಂಸದ ಪ್ರತಾಪ್‌ ಸಿಂಹ ಕೂಡ ಸುಮಲತಾ ಅವರ ಹೇಳಿಕೆಯನ್ನು ಅಲ್ಲಗಳೆದಿದ್ದಾರೆ. ಹಾಗಾಗಿ ಸುಮಲತಾ ಸಂಸತ್‌ ಸದಸ್ಯರಾಗಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಮುಖಂಡ ವಿಜಯಕುಮಾರ್‌ ಹೇಳಿದರು.

ಸುಮಲತಾ ಅವರ ವಿರುದ್ಧ ಸರ್ಕಾರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ಅವರ ಹೇಳಿಕೆ ಕುರಿತು ತನಿಖೆ ನಡೆಸಬೇಕು. ಆತಂಕಗೊಂಡಿರುವ ಜನರಿಗೆ ಧೈರ್ಯ ತುಂಬಬೇಕು ಎಂದು ಎಂ.ಬಿ.ಕುಮಾರ್‌ ತಿಳಿಸಿದರು.

ಮುಖಂಡರಾದ ಬೆಳಗೊಳ ರವಿ., ಸಿ.ಮಂಜುನಾಥ್‌, ರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ಬಿಟ್ಟಿದೆ ಎಂಬ ಸುಮಲತಾ ಅವರ ಹೇಳಿಕೆ ಆಧಾರ ರಹಿತವಾಗಿದ್ದು, ಅವರು ತಮ್ಮ ಹೇಳಿಕೆಗೆ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಪಾಲಹಳ್ಳಿ ಮುಕುಂದ ಅವರು ನೇತೃತ್ವದಲ್ಲಿ ಪಟ್ಟಣದ ಕುವೆಂಪು ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಎಚ್‌.ಡಿ.ಕುಮಾರಸ್ವಾಮಿ ಅಭಿಮಾನಿಗಳ ಸಂಘದ ಅಧ್ಯಕ್ಷ ಕೆ.ಎನ್‌.ಕುಮಾರಸ್ವಾಮಿ, ಜೆಡಿಎಸ್‌ ಕಾರ್ಯಾಧ್ಯಕ್ಷ ಎನ್‌. ಶಿವಸ್ವಾಮಿ, ಪುರಸಭೆ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಎಸ್‌.ಪ್ರಕಾಶ್‌, ಸದಸ್ಯರಾದ ಗಂಜಾಂ ಕೃಷ್ಣಪ್ಪ, ಎಸ್‌.ಟಿ. ರಾಜು, ತಾ.ಪಂ. ಮಾಜಿ ಅಧ್ಯಕ್ಷ ಬಿ.ಎಸ್‌. ಸಂದೇಶ್‌, ಗ್ರಾ.ಪಂ. ಸದಸ್ಯ ಟೆಂಪೋ ಪ್ರಕಾಶ್‌, ನಾಗರಾಜು, ನಾರಾಯಣಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT