ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ | ಕೆ.ಎಸ್‌. ಭಗವಾನ್‌ ಭಾವಚಿತ್ರ ಸುಟ್ಟು ಪ್ರತಿಭಟನೆ

Published 15 ಅಕ್ಟೋಬರ್ 2023, 13:39 IST
Last Updated 15 ಅಕ್ಟೋಬರ್ 2023, 13:39 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಒಕ್ಕಲಿಗ ಸಮುದಾಯದ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಾಹಿತಿ ಪ್ರೊ.ಕೆ.ಎಸ್‌. ಭಗವಾನ್‌ ಅವರ ವಿರುದ್ಧ ಪಟ್ಟಣದಲ್ಲಿ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಕುವೆಂಪು ವೃತ್ತದಲ್ಲಿ ಕೆ.ಎಸ್‌. ಭಗವಾನ್‌ ಅವರ ಭಾವಚಿತ್ರವನ್ನು ಹರಿದು ಪ್ರತಿಭಟಿಸಿದರು. ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಭಗವಾನ್‌ ಅವರ ವಿರುದ್ಧ ಸಾಲು ಸಾಲು ಘೋಷಣೆ ಕೂಗಿದರು.

‘ಕೆ.ಎಸ್‌. ಭಗವಾನ್‌ ಅವರು ಪುಕ್ಕಟೆ ಪ್ರಚಾರಕ್ಕಾಗಿ ಒಕ್ಕಲಿಗರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಅವರು ಬಹಿರಂಗವಾಗಿ ಒಕ್ಕಲಿಗ ಸಮುದಾಯದ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರು ಭಾಗವಹಿಸುವ ಎಲ್ಲ ಕಾರ್ಯಕ್ರಮಗಳಿಗೆ ಪ್ರತಿರೋಧ ಒಡ್ಡಲಾಗುವುದು’ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸಿ. ಸ್ವಾಮಿಗೌಡ ಎಚ್ಚರಿಸಿದರು.

ಒಕ್ಕಲಿಗರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್‌, ಪ್ರಧಾನ ಕಾರ್ಯದರ್ಶಿ ಮರಳಾಗಾಲ ಗುರು, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಅಧ್ಯಕ್ಷ ಗೌಡಹಳ್ಳಿ ದೇವರಾಜು, ನಗುವನಹಳ್ಳಿ ಶಿವಸ್ವಾಮಿ, ಜಿ.ಇ. ಸುಧಾಕರ್‌, ಗಂಜಾಂ ಯೋಗಣ್ಣ, ಮರಿಲಿಂಗೇಗೌಡ, ಕುಮಾರ್‌, ಮಹದೇವಪುರ ಸುರೇಶ್‌, ನಂದೀಶ್‌, ಚಂದಗಿರಿಕೊಪ್ಪಲು ನಾಗರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT