ಮಂಡ್ಯ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿರುವುದನ್ನು ಖಂಡಿಸಿ ರೈತಸಂಘದ ಸದಸ್ಯರು ಶ್ರೀರಂಗಪಟ್ಟಣದಲ್ಲಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಈಗಾಗಲೇ 15 ದಿನ ತಮಿಳುನಾಡಿಗೆ ನಿತ್ಯ ಸರಾಸರಿ 6- 7 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿದೆ. ಈಗ ಮತ್ತೆ ನೀರು ಬಿಡಿಗಡೆಗೆ ಶಿಫಾರಸು ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.