ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಉಚ್ಛಾಟಿತ ಮುಖಂಡ, ಎಂ.ಟೆಕ್‌ ಪದವೀಧರ ಶರತ್‌ ರಾಮಣ್ಣ ಬಂಧನ

Last Updated 11 ಮೇ 2022, 10:28 IST
ಅಕ್ಷರ ಗಾತ್ರ

ಮಂಡ್ಯ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ನಾಗಮಂಗಲ ಪಟ್ಟಣದ ಎಂ.ಟೆಕ್‌ ಪದವೀಧರ, ಯುವ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿದ್ದ ಮುಖಂಡ ಶರತ್ ರಾಮಣ್ಣ ಅವರನ್ನು ಸಿಐಡಿ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಉದ್ಯಮಿಯಾಗಿರುವ ಶರತ್‌ ರಾಮಣ್ಣ ಚಲನಚಿತ್ರ ನಿರ್ಮಾಣದಲ್ಲೂ ತೊಡಗಿದ್ದರು, ವಿವಿಧೆಡೆ ಹಣಕಾಸು ವಹಿವಾಟು ನಡೆಸುತ್ತಿದ್ದರು. ನಾಗಮಂಗಲ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಕಳೆದ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅವರ ಪರವಾಗಿ ಪ್ರಚಾರ ನಡೆಸಿದ ಕಾರಣಕ್ಕೆ ಕಾಂಗ್ರೆಸ್‌ನಿಂದ ಉಚ್ಛಾಟಿತಗೊಂಡಿದ್ದರು.

ನಾಗಮಂಗಲದಲ್ಲಿ ಇವರ ಒಡೆತನದಲ್ಲಿರುವ ವಾಣಿಜ್ಯ ಕಟ್ಟಡದಲ್ಲೇ ತಾಲ್ಲೂಕು ಕಾಂಗ್ರೆಸ್‌ ಕಚೇರಿ, ಕಾಂಗ್ರೆಸ್‌ ಮುಖಂಡ ಎನ್‌.ಚಲುವರಾಯಸ್ವಾಮಿ ಅವರ ಕಚೇರಿ ಇವೆ. ಪಿಎಸ್‌ಐ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿ ಹಾಸನ ಜಿಲ್ಲೆ, ಶ್ರವಣಬೆಳಗೊಳ ಮೂಲದ ವ್ಯಕ್ತಿಯೊಬ್ಬರಿಂದ ₹ 40 ಲಕ್ಷ ಹಣ ಪಡೆದ ಆರೋಪವಿದ್ದು ಅದರ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಐಡಿ ಪೊಲೀಸರು ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT