ಮಳವಳ್ಳಿ: ವಿದ್ಯಾರ್ಥಿಗಳು ಟಿವಿ ಮತ್ತು ಬೈಕ್ ಬಳಕೆಯಿಂದ ದೂರವಿದ್ದು, ಓದಿನತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ಕಿವಿಮಾತು ಹೇಳಿದರು.

ತಾಲ್ಲೂಕಿನ ಪಂಡಿತಹಳ್ಳಿ ಗ್ರಾಮದ ಸೇಂಟ್ ಜೋಸೆಫ್ ಶಾಲೆಯಲ್ಲಿ ಮಂಗಳವಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಆಸಕ್ತಿ ಇರುವ ವಿಷಯಗಳ ಆಯ್ಕೆಗೆ ಪೋಷಕರು ಮುಂದಾಗಬೇಕು. ವಿದ್ಯಾರ್ಥಿಗಳು ಮೊಬೈಲ್ ಕ್ಕಿಂತ ಪುಸ್ತಕದತ್ತ ಗಮನ ನೀಡಿದರೆ ಜ್ಞಾನಾರ್ಜನೆ ಹೆಚ್ಚುತ್ತದೆ ಎಂದು ಹೇಳಿದರು.ಯಾವುದಾದರೂ ಇಲಾಖೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದರು.

ಶಾಲೆಯ ಸಂಚಾಲಕ ಎಸ್.ಜೆ.ಪ್ರದೀಪ್ ಅಂತೋನಿ ಮಾತನಾಡಿ, ಪರಿಶ್ರಮ, ಕಲಿಕಾ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಬೇಕು ಎಂದು ಹೇಳಿದರು. ಪ್ರಾಂಶುಪಾಲರಾದ ಎಸ್.ಜೆ. ಆಲ್ವಿನ್ ಡಿಸೋಜ, ಲೋಕಾಯುಕ್ತ ಡಿವೈಎಸ್ಪಿ ಎಚ್.ಸಿ.ಸುನಿಲ್ ಕುಮಾರ್, ಇನ್ಸ್ಪೆಕ್ಟರ್ ಎಂ.ರವಿಕುಮಾರ್, ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.