ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಭಿಮಾನಿಗಳ ಹೃದಯಲ್ಲಿರುವ ಪುನೀತ್‌: ನಿರ್ಮಾಪಕ ವೈ.ಎಸ್‌.ಶಂಕರೇಗೌಡ

Published 12 ನವೆಂಬರ್ 2023, 13:07 IST
Last Updated 12 ನವೆಂಬರ್ 2023, 13:07 IST
ಅಕ್ಷರ ಗಾತ್ರ

ಮಂಡ್ಯ: ನಟ ಪುನೀತ್‌ ರಾಜಕುಮಾರ್‌ ಅವರು ಅಭಿಮಾನಿಗಳ ಹೃದಯದಲ್ಲಿ ಇಂದಿಗೂ ಜೀವಂತವಾಗಿದ್ದಾರೆ ಎಂದು ಚಲನಚಿತ್ರ ನಿರ್ಮಾಪಕ ವೈ.ಎಸ್‌.ಶಂಕರೇಗೌಡ ಹೇಳಿದರು.

ನಗರದ ಜೆ.ಸಿ. ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಪುನೀತ್‌ ರಾಜ್‌ಕುಮಾರ್ ಎರಡನೇ ವರ್ಷದ ಪುಣ್ಯಸ್ಮರಣೆ ಹಾಗೂ ತೆಂಗಿನಸಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶ್ರೇಷ್ಠತೆ ಪಡೆದುಕೊಂಡಿರುವ ಕಲ್ಪವೃಕ್ಷ ಸಸಿ ನೀಡುವ ಮೂಲಕ ಪುನೀತ್‌ ಅವರನ್ನು ಸ್ಮರಿಸಿಕೊಳ್ಳುತ್ತಿರುವುದು ಉತ್ತಮ ಸೇವಾ ಕಾರ್ಯ. ಅವರು ನಡೆದು ಬಂದ ದಾರಿ ನಮಗೆಲ್ಲರಿಗೂ ದಾರಿ ದೀಪವಾಗಿದ್ದು, ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಅಧ್ಯಕ್ಷ ಕೆ.ಟಿ.ಶಂಕರೇಗೌಡ ಮಾತನಾಡಿದರು.

ರೈತರಿಗೆ ಹಾಗೂ ಅಭಿಮಾನಿಗಳಿಗೆ ತೆಂಗಿನ ಸಸಿ ವಿತರಿಸಲಾಯಿತು.

ಉದ್ಯಮಿ ಜಗನ್ನಾಥಶೆಟ್ಟಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ, ಡಿ.ಅಶೋಕ್, ಬೋರೇಗೌಡ, ಮಹೇಶ್, ಸತೀಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT